- Kannada News Photo gallery Cricket photos Thamsin Newton Retires: Shock for New Zealand Ahead of Women's World Cup
ಏಕದಿನ ವಿಶ್ವಕಪ್ಗೂ ಮುನ್ನ ಕ್ರಿಕೆಟ್‌ಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಆಲ್‌ರೌಂಡರ್
Thamsin Newton Retires: ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಲ್‌ರೌಂಡರ್ ಥಾಮ್ಸಿನ್ ನ್ಯೂಟನ್ ಅವರು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಮಹಿಳಾ ವಿಶ್ವಕಪ್‌ಗೆ ಕೆಲವೇ ದಿನಗಳು ಬಾಕಿ ಇರುವಾಗ ಈ ಸುದ್ದಿ ನ್ಯೂಜಿಲೆಂಡ್ ತಂಡಕ್ಕೆ ದೊಡ್ಡ ಆಘಾತವಾಗಿದೆ. ಟಿ20 ಮತ್ತು ಏಕದಿನ ವಿಶ್ವಕಪ್‌ಗಳಲ್ಲಿ ಆಡಿದ್ದ ನ್ಯೂಟನ್ ಅವರು 10 ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ್ದಾರೆ.
Updated on: Aug 10, 2025 | 8:57 PM

ಮಹಿಳಾ ಏಕದಿನ ವಿಶ್ವಕಪ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ನ್ಯೂಜಿಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಥಾಮ್ಸಿನ್ ನ್ಯೂಟನ್ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತಂಡದಿಂದ ಹೊರಗಿದ್ದ ನ್ಯೂಟನ್ ಇದೀಗ ತಮ್ಮ ವೃತ್ತಿಜೀವನಕ್ಕೆ ಪೂರ್ಣ ವಿರಾಮ ಹಾಕಲು ನಿರ್ಧರಿಸಿದ್ದಾರೆ.

2016 ರ ಟಿ20 ವಿಶ್ವಕಪ್ ಮತ್ತು 2017 ರ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡದ ಭಾಗವಾಗಿದ್ದ ನ್ಯೂಟನ್ ಅವರ 10 ವರ್ಷಗಳ ಸುದೀರ್ಘ ವೃತ್ತಿಜೀವನ ಕೊನೆಗೊಂಡಿದೆ. 2015 ರಲ್ಲಿ ನ್ಯೂಜಿಲೆಂಡ್ ಪರ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನ್ಯೂಟನ್ 2021 ರಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.

ಅಗ್ರ ಕ್ರಮಾಂಕದಲ್ಲಿ ಆಡುತ್ತಿದ್ದ ಥಾಮ್ಸಿನ್ ನ್ಯೂಟನ್, ಮಧ್ಯಮ ವೇಗದ ಬೌಲರ್ ಕೂಡ ಆಗಿದ್ದರು. ತಮ್ಮ 10 ವರ್ಷಗಳ ವೃತ್ತಿಜೀವನದಲ್ಲಿ ಒಟ್ಟು 15 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದ ನ್ಯೂಟನ್ 9 ವಿಕೆಟ್‌ಗಳನ್ನು ಪಡೆದಿರುವುದರ ಜೊತೆಗೆ 22 ರನ್‌ಗಳನ್ನು ಬಾರಿಸಿದ್ದರು.

ಹಾಗೆಯೇ 2016ರಲ್ಲಿ ನ್ಯೂಜಿಲೆಂಡ್ ಪರ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದ ನ್ಯೂಟನ್ ಅದೇ ವರ್ಷ ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ ಮೊದಲ ಬಾರಿಗೆ ಐದು ವಿಕೆಟ್ಗಳ ಗೊಂಚಲು ಪಡೆದರು. ಅಲ್ಲದೆ ಅದೇ ಪಂದ್ಯದಲ್ಲಿ 19 ರನ್ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ತಂಡದ ಪರ 10 ಏಕದಿನ ಪಂದ್ಯಗಳನ್ನಾಡಿರುವ ನ್ಯೂಟನ್ ಒಟ್ಟು 11 ವಿಕೆಟ್‌ಗಳನ್ನು ಪಡೆದು 57 ರನ್‌ಗಳನ್ನು ಬಾರಿಸಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ವೃತ್ತಿಜೀವನವು ಹೆಚ್ಚು ಕಾಲ ಇರಲಿಲ್ಲವಾದರೂ, ದೇಶೀಯ ಸರ್ಕ್ಯೂಟ್‌ನಲ್ಲಿ ಮಿಂಚಿದ್ದರು. 2011-12ರಲ್ಲಿ ವೆಲ್ಲಿಂಗ್ಟನ್ ತಂಡದೊಂದಿಗೆ ತಮ್ಮ ದೇಶೀಯ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು 2014 ರಿಂದ 2018 ರವರೆಗೆ ಕ್ಯಾಂಟರ್ಬರಿಯಲ್ಲಿದ್ದರು. ಹಾಗೆಯೇ 2017-18ರ WBBL ನಲ್ಲಿ ಪರ್ತ್ ಸ್ಕಾರ್ಚರ್ಸ್ ಪರವೂ ಆಡಿದ್ದ ಅವರು 14 ಪಂದ್ಯಗಳಲ್ಲಿ ಒಟ್ಟು 6 ವಿಕೆಟ್‌ಗಳನ್ನು ಪಡೆದರು.




