ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ

|

Updated on: Dec 25, 2024 | 6:30 AM

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಇಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಆದರೆ ಭಾರತ ತಂಡದ ಪಂದ್ಯಗಳಿಗೆ ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂ ಅನ್ನು ಆಯ್ಕೆ ಮಾಡಿರುವುದೇ ಈಗ ಹೊಸ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಈ ಮೈದಾನದಲ್ಲಿ ಗೆಲ್ಲಬೇಕಿದ್ದರೆ ಅದೃಷ್ಟ ಕೂಡ ಕೈ ಹಿಡಿಯಬೇಕಾಗುತ್ತದೆ.

1 / 7
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 8 ತಂಡಗಳ ನಡುವಣ ಈ ಕದನವು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಇನ್ನು ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

2 / 7
ಹಾಗೆಯೇ ಟೀಮ್ ಇಂಡಿಯಾ ಫೆಬ್ರವರಿ 20 ರಂದು ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

3 / 7
ಇನ್ನು ಟೀಮ್ ಇಂಡಿಯಾದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ಈ ಪಂದ್ಯ ಕೂಡ ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿದೆ.

4 / 7
ಹಾಗೆಯೇ ಭಾರತ ತಂಡವು ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಅಂದರೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳನ್ನು ದುಬೈನಲ್ಲೇ ಆಡಲಿದೆ.

5 / 7
ಅತ್ತ ಭಾರತ ತಂಡವು ದುಬೈನಲ್ಲಿ ಪಂದ್ಯವಾಡಬೇಕಿರುವುದೇ ಈಗ ದೊಡ್ಡ ಚಿಂತೆ. ಏಕೆಂದರೆ ದುಬೈ ಸ್ಟೇಡಿಯಂನಲ್ಲಿ ಟಾಸ್ ನಿರ್ಣಾಯಕ. ಈ ಮೈದಾನದಲ್ಲಿ ಟಾಸ್ ಗೆಲ್ಲುವ ತಂಡ ಮ್ಯಾಚ್ ಗೆಲ್ತಾರೆ ಎಂಬ ಪ್ರತೀತಿ ಇದೆ. ಇದನ್ನೇ ಅಂಕಿ ಅಂಶಗಳು ಕೂಡ ಒತ್ತಿ ಹೇಳುತ್ತಿವೆ. ಇಲ್ಲಿ ಆಡಲಾದ 33 ಏಕದಿನ ಪಂದ್ಯಗಳಲ್ಲಿ 20 ಮ್ಯಾಚ್​ಗಳಲ್ಲಿ ಟಾಸ್ ಗೆದ್ದು ಚೇಸಿಂಗ್ ಮಾಡಿದ ತಂಡವೇ ಗೆದ್ದಿದೆ. ಇನ್ನು ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿರುವುದು ಕೇವಲ 12 ಬಾರಿ ಮಾತ್ರ.

6 / 7
ನಿಮಗೆ ನೆನಪಿರುವಂತೆ, ಭಾರತ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ್ ವಿರುದ್ಧ ಸೋತಿರುವುದು ಕೇವಲ ಒಮ್ಮೆ ಮಾತ್ರ. ಅದು ಕೂಡ ಇದೇ ಮೈದಾನದಲ್ಲಿ ಎಂಬುದು ಉಲ್ಲೇಖಾರ್ಹ. 2021ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ನೀಡಿದ 152 ರನ್​ಗಳ ಗುರಿಯನ್ನು ಪಾಕಿಸ್ತಾನ್ ವಿಕೆಟ್ ನಷ್ಟವಿಲ್ಲದೆ ಚೇಸ್ ಮಾಡಿತ್ತು. ಅಂದು ಪಾಕ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಇದೇ ಟೂರ್ನಿಯಲ್ಲಿ ನ್ಯೂಝಿಲೆಂಡ್ ಕೂಡ ಟೀಮ್ ಇಂಡಿಯಾವನ್ನು ಸೋಲಿಸಿತ್ತು.

7 / 7
ಅಂದರೆ ದುಬೈನಲ್ಲಿ ನಡೆದ 2021ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಟಾಸ್ ಸೋತ ಪಂದ್ಯಗಳಲ್ಲಿ ಮುಗ್ಗರಿಸಿತ್ತು. ಅಲ್ಲದೆ ಈ ಮೈದಾನದಲ್ಲಿ ಕಣಕ್ಕಿಳಿದ ಬಹುತೇಕ ತಂಡಗಳು ಚೇಸಿಂಗ್​ ಮೂಲಕ ಗೆಲುವು ದಾಖಲಿಸಿದ ಇತಿಹಾಸವೇ ಇದೆ. ಹೀಗಾಗಿ ಈ ಬಾರಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲಬೇಕಿದ್ದರೆ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿರುವುದು ಸ್ಪಷ್ಟ.