AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದ್ದಕ್ಕಿದ್ದಂತೆ ತಂಡದ ತೊರೆದ ಸೂಪರ್‌ಜೈಂಟ್ಸ್ ನಾಯಕ ಐಡೆನ್ ಮಾರ್ಕ್ರಾಮ್

The Hundred: ದಿ ಹಂಡ್ರೆಡ್ ಲೀಗ್‌ನ 21ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದಾರೆ. ನಾಯಕ ಐಡೆನ್ ಮಾರ್ಕ್ರಾಮ್ ಕೌಟುಂಬಿಕ ತುರ್ತು ಪರಿಸ್ಥಿತಿಯಿಂದ ಟೂರ್ನಿ ತೊರೆದ ಕಾರಣ ಈ ಬದಲಾವಣೆ ಮಾಡಲಾಗಿದೆ. ಅವರ ಬದಲಿಗೆ ನ್ಯೂಜಿಲೆಂಡ್‌ನ ಮೈಕೆಲ್ ಬ್ರೇಸ್‌ವೆಲ್ ತಂಡಕ್ಕೆ ಸೇರಿದ್ದಾರೆ. ಉತ್ತಮ ಫಾರ್ಮ್‌ನಲ್ಲಿರುವ ಬಟ್ಲರ್, ವೆಲ್ಷ್ ಫೈರ್ ವಿರುದ್ಧದ ಈ ಮಹತ್ವದ ಪಂದ್ಯದಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಸವಾಲು ಎದುರಿಸಲಿದ್ದಾರೆ.

ಪೃಥ್ವಿಶಂಕರ
|

Updated on: Aug 05, 2026 | 9:09 PM

Share
ದಿ ಹಂಡ್ರೆಡ್‌ ಲೀಗ್​ನ 21 ನೇ ಪಂದ್ಯ ಇಂದು ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಹಾಗೂ ವೆಲ್ಷ್ ಫೈರ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ತಂಡದ ಖಾಯಂ ನಾಯಕ ಐಡೆನ್ ಮಾರ್ಕ್ರಾಮ್ ಬದಲಿಗೆ ಜೋಸ್ ಬಟ್ಲರ್​ ನಾಯಕತ್ವವಹಿಸಿದ್ದಾರೆ(PC-PTI).

1 / 5
ಇದಕ್ಕೆ ಕಾರಣವೂ ಇದ್ದು, ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ನಾಯಕ ಐಡೆನ್ ಮಾರ್ಕ್ರಾಮ್ ಹಠಾತ್ತನೆ ಪಂದ್ಯಾವಳಿಯನ್ನು ತೊರೆದು ಇಂಗ್ಲೆಂಡ್‌ನಿಂದ ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದಾರೆ. ಐಡೆನ್ ಮಾರ್ಕ್ರಾಮ್ ವೈಯಕ್ತಿಕ ಕಾರಣದಿಂದಾಗಿ ತಂಡವನ್ನು ತೊರೆದಿದ್ದಾರೆ. ಕೌಟುಂಬಿಕ ತುರ್ತು ಪರಿಸ್ಥಿತಿ ಇರುವ ಕಾರಣ ತಂಡವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ(PC-PTI).

2 / 5
ಐಡೆನ್ ಮಾರ್ಕ್ರಾಮ್ ಬದಲಿಯಾಗಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ನ್ಯೂಜಿಲೆಂಡ್ ಆಲ್‌ರೌಂಡರ್ ಮೈಕೆಲ್ ಬ್ರೇಸ್‌ವೆಲ್ ಅವರನ್ನು ನೇಮಿಸಿಕೊಂಡಿದೆ. 35 ವರ್ಷದ ಬ್ರೇಸ್‌ವೆಲ್ ಇತ್ತೀಚೆಗೆ ಗ್ಲೋಬಲ್ ಸೂಪರ್ ಲೀಗ್‌ನಲ್ಲಿ ಲಾಹೋರ್ ಖಲಂದರ್ಸ್‌ ಪರ ಆಡಿದ್ದರು. ಕಳೆದ ವರ್ಷ ಸದರ್ನ್ ಬ್ರೇವ್‌ ತಂಡದ ಪರ ಹಂಡ್ರೆಡ್‌ನಲ್ಲಿ ಆಡಿದ್ದರು(PC-PTI).

3 / 5
ಹೀಗಾಗಿ ಮೇಲೆ ಹೇಳಿದಂತೆ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡವನ್ನು ಐಡೆನ್ ಮಾರ್ಕ್ರಾಮ್ ಬದಲಿಗೆ ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದಾರೆ. ಪ್ರಸ್ತುತ ಟೂರ್ನಮೆಂಟ್‌ನಲ್ಲಿ ಬಟ್ಲರ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಜೋಸ್ ಬಟ್ಲರ್ ಇಲ್ಲಿಯವರೆಗೆ 14 ಸಿಕ್ಸರ್‌ಗಳು ಮತ್ತು 15 ಬೌಂಡರಿಗಳೊಂದಿಗೆ 226 ರನ್ ಗಳಿಸಿದ್ದಾರೆ. ಅವರ ಸರಾಸರಿ 75.33 ಮತ್ತು ಅವರು ಸುಮಾರು 170 ಸ್ಟ್ರೈಕ್ ರೇಟ್‌ನಲ್ಲಿ ಸ್ಕೋರ್ ಮಾಡುತ್ತಿದ್ದಾರೆ(PC-PTI).

4 / 5
ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಬಗ್ಗೆ ಹೇಳುವುದಾದರೆ, ಈ ಆವೃತ್ತಿಯ ದಿ ಹಂಡ್ರೆಡ್ ಲೀಗ್​ನಲ್ಲಿ ಇದುವರೆಗೆ ಆಡಿರುವ ಐದು ಪಂದ್ಯಗಳಲ್ಲಿ ಎರಡನ್ನು ಮಾತ್ರ ಗೆದ್ದಿದ್ದು, ಉಳಿದಂತೆ ಮೂರರಲ್ಲಿ ಸೋತಿದೆ. ಟ್ರೆಂಟ್ ರಾಕೆಟ್ಸ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದು ನಂ. 1 ಸ್ಥಾನದಲ್ಲಿದ್ದರೆ, ಇಂದಿನ ಎದುರಾಳಿ ವೆಲ್ಷ್ ಫೈರ್ ನಂ. 2 ಸ್ಥಾನದಲ್ಲಿದೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!

ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ

ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್

‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್

ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು

ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ