ರನ್ ರಾಶಿಯೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

Updated on: Aug 05, 2025 | 12:15 PM

India vs England: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ದಾಖಲೆಗಳೊಂದಿಗೆ 97 ವರ್ಷಗಳ ಹಳೆಯ ವಿಶ್ವ ದಾಖಲೆಯೊಂದನ್ನು ಸಹ ಅಳಿಸಿ ಹಾಕಿದ್ದಾರೆ. ಈ ಮೂಲಕ 5 ಮ್ಯಾಚ್​ಗಳ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಪೇರಿಸಿದ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

1 / 5
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಗಿದಿದೆ. 5 ಪಂದ್ಯಗಳ ಸರಣಿಯನ್ನು 2-2 ಅಂತರದಿಂದ ಕೊನೆಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಸರಣಿಯುದ್ದಕ್ಕೂ ಭಾರತದ ಪರ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಭರ್ಜರಿ ಪ್ರದರ್ಶನೊಂದಿಗೆ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಹೊಸ ಇತಿಹಾಸವನ್ನು ಸಹ ರಚಿಸಿದ್ದಾರೆ.

2 / 5
ಹೌದು, ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಸರಣಿವೊಂದರಲ್ಲಿ 3500+ ರನ್ ಕಲೆಹಾಕಿದೆ. ಅಂದರೆ 5 ಪಂದ್ಯಗಳ ಮೂಲಕ ಭಾರತೀಯ ಬ್ಯಾಟರ್​ಗಳು ಕಲೆಹಾಕಿದ ಒಟ್ಟು ಸ್ಕೋರ್ ಬರೋಬ್ಬರಿ 3809 ರನ್​ಗಳು. ಈ ಮೂಲಕ 1979 ರಲ್ಲಿ ನಿರ್ಮಾಣವಾಗಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. 

3 / 5
1979 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ 3270 ರನ್ ಕಲೆಹಾಕಿದ್ದರು. ಆದರೆ ಅದು 6 ಪಂದ್ಯಗಳ ಸರಣಿಯಾಗಿತ್ತು. ಈ ಬಾರಿ ಟೀಮ್ ಇಂಡಿಯಾ 5 ಪಂದ್ಯಗಳ ಸರಣಿಯ ಮೂಲಕ ಒಟ್ಟು 3809 ರನ್​ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಸರಣಿವೊಂದರಲ್ಲಿ 3800+ ರನ್​ ಕಲೆಹಾಕಿದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ.

4 / 5
ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದೆ. ಆಸೀಸ್ ಪಡೆ 1989 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಬರೋಬ್ಬರಿ 3877 ರನ್​ ಕಲೆಹಾಕಿದ್ದರು. ಆದರೆ ಇದು ಪಂದ್ಯಗಳ ಸರಣಿಯಾಗಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

5 / 5
ಇದೀಗ 5 ಪಂದ್ಯಗಳ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಭಾರತ ತಂಡವು 5 ಮ್ಯಾಚ್​ಗಳಿಂದ ಒಟ್ಟು 3809 ರನ್​ ಗಳಿಸಿ, 1928 ರಲ್ಲಿ 5 ಪಂದ್ಯಗಳ ಮೂಲಕ ಆಸ್ಟ್ರೇಲಿಯಾ ಬರೆದಿದ್ದ 3757 ರನ್​ಗಳ ದಾಖಲೆಯನ್ನು ಮುರಿದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ 5 ಪಂದ್ಯಗಳ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ತಂಡ ಎಂಬ ವಿಶ್ವ ದಾಖಲೆಯನ್ನು ಯಂಗ್ ಇಂಡಿಯಾ ತನ್ನದಾಗಿಸಿಕೊಂಡಿದೆ.

Published On - 12:09 pm, Tue, 5 August 25