AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಕಿತ್ತೋದ ಪಿಚ್ ನೀಡಿದ ಆಸ್ಟ್ರೇಲಿಯಾ..!

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿವೆ. ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 295 ರನ್​ಗಳ ಭರ್ಜರಿ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಉಭಯ ತಂಡಗಳು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Dec 23, 2024 | 12:56 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಉಭಯ ತಂಡಗಳು ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿದೆ. ಇದರ ನಡುವೆ ಟೀಮ್ ಇಂಡಿಯಾದ ಅಭ್ಯಾಸಕ್ಕಾಗಿ ನೀಡಿದ ಪಿಚ್​ ಬಗ್ಗೆ ಅಪಸ್ವರಗಳು ಕೇಳಿ ಬಂದಿದೆ.

1 / 5
ಭಾರತ ತಂಡದ ಅಭ್ಯಾಸಕ್ಕೆ ಹಳೆಯ ಪಿಚ್​ ಅನ್ನು ನಿಗದಿ ಮಾಡಲಾಗಿದೆ. ಹಲವು ಕಡೆ ಕಿತ್ತೋಗಿರುವ ಈ ಪಿಚ್​​ನಲ್ಲಿ ಅಭ್ಯಾಸ ನಡೆಸುವುದು ಹೇಗೆ ಎಂದು ಕೆಲ ಆಟಗಾರರು ಆಕ್ರೋಶ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಈ ಪಿಚ್​ನಲ್ಲಿ ಚೆಂಡು ಬೌನ್ಸ್ ಆಗುತ್ತಿಲ್ಲ. ಹೀಗಾಗಿ ಇದು ಅಭ್ಯಾಸಕ್ಕೆ ಯೋಗ್ಯವಲ್ಲದ ಪಿಚ್ ಎನ್ನಲಾಗಿದೆ.

2 / 5
ಆದರೆ ಮತ್ತೊಂದೆಡೆ ಆಸ್ಟ್ರೇಲಿಯಾ ತಂಡಕ್ಕೆ ನೀಡಲಾದ ಪಿಚ್ ಅತ್ಯುತ್ತಮ ಗುಣಮುಟ್ಟದಿಂದ ಕೂಡಿದೆ. ಅಲ್ಲದೆ ಎಂಸಿಜಿ ಕ್ಯುರೇಟರ್​ಗಳು ಆಸ್ಟ್ರೇಲಿಯಾ ಅಭ್ಯಾಸ ಮಾಡಬೇಕಿರುವ ಪಿಚ್​ನಲ್ಲಿ ರೋಲರ್ ಓಡಿಸುತ್ತಿರುವುದು ಈ ಫೋಟೋದಲ್ಲಿ ಕಾಣಬಹುದು. ಹೀಗಾಗಿಯೇ ಎಂಸಿಜಿ ಆಡಳಿತ ಮಂಡಳಿಯ ತಾರತಮ್ಯದ ಬಗ್ಗೆ ವ್ಯಾಪಕ ಆಕ್ರೋಶಗಳು ಕೇಳಿ ಬರುತ್ತಿದೆ.

3 / 5
ಈ ಬಗ್ಗೆ ಎಂಸಿಜಿ ಕ್ಯುರೇಟರ್​ರನ್ನು ಪ್ರಶ್ನಿಸಿದಾಗ, ನಮ್ಮಲ್ಲಿರುವ ಪಿಚ್​ಗಳನ್ನು ಮಾತ್ರ ನಾವು ನೀಡಲು ಸಾಧ್ಯ. ಹೀಗಾಗಿ ಇರುವ ಪಿಚ್ ನೀಡಿದ್ದೇವೆ ಎಂದು ತನ್ನ ನಡೆಯನ್ನು ಕ್ಯುರೇಟರ್ ಸಮರ್ಥಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೀಗ ಕಳಪೆ ಗುಣಮಟ್ಟದ ಪಿಚ್ ನೀಡಿರುವ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ನ ನಡೆಯ ಬಗ್ಗೆ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಇದನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹೇಗೆ ಸಮರ್ಥಿಸಿಕೊಳ್ಳಲಿದೆ ಕಾದು ನೋಡಬೇಕಿದೆ.

4 / 5
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ. ಅದರಲ್ಲೂ ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಹೀಗಾಗಿ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ