ಭಾರತ-ಐರ್ಲೆಂಡ್ ಮೊದಲ ಟಿ20 ಪಂದ್ಯ ನಡೆಯಲಿರುವ ಡಬ್ಲಿನ್ ಪಿಚ್ ಹೇಗಿದೆ?: ಯಾರಿಗೆ ಸಹಕಾರಿ?

IRE vs IND 1st T20I, The Village Pitch Report: ಇಂದು ಭಾರತ ಹಾಗೂ ಐರ್ಲೆಂಡ್ ನಡುವೆ ಪ್ರಥಮ ಟಿ20 ಪಂದ್ಯ ನಡೆಯಲಿದ್ದು, ಇದು ಡಬ್ಲಿನ್​ನ ದಿ ವಿಲೇಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇಲ್ಲಿನ ಪಿಚ್ ಬಗ್ಗೆ ನೋಡುವುದಾದರೆ, ಇದು ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

Vinay Bhat
|

Updated on: Aug 18, 2023 | 7:35 AM

ವೆಸ್ಟ್ ಇಂಡೀಸ್ ವಿರುದ್ಧ 3-2 ಅಂಕಗಳ ಅಂತರದಿಂದ ಸೋಲು ಅನುಭವಿಸಿದ ಭಾರತ ಕ್ರಿಕೆಟ್ ತಂಡ ಇದೀಗ ಐರ್ಲೆಂಡ್ ವಿರುದ್ಧ ಮತ್ತೊಂದು ಟಿ20 ಸರಣಿಗೆ ಸಜ್ಜಾಗಿದೆ. ಮೊದಲ ಪಂದ್ಯವು ಇಂದು (ಆಗಸ್ಟ್ 18) ಡಬ್ಲಿನ್​ನ ದಿ ವಿಲೇಜ್​ನಲ್ಲಿ ನಿಗದಿಯಾಗಿದೆ. ಐರ್ಲೆಂಡ್ ಸರಣಿಗಾಗಿ ಹೆಚ್ಚು ಯುವ ಆಟಗಾರರಿಂದಲೇ ಕೂಡಿರುವ ಟೀಮ್ ಇಂಡಿಯಾ ಯಾವ ರೀತಿ ಪ್ರದರ್ಶನ ನೀಡುತ್ತೆ ಎಂಬುದು ನೋಡಬೇಕಿದೆ.

1 / 8
ಜಸ್​ಪ್ರಿತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದು, ಒಂದು ವರ್ಷದ ನಂತರ ವಾಪಸ್ಸಾಗಿದ್ದಾರೆ. ತಂಡದದಲ್ಲಿ ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಅವರಂತಹ ಹೊಸಬರನ್ನು ಸಹ ಸೇರಿಸಿಕೊಳ್ಳಲಾಗಿದೆ. ಇದಲ್ಲದೆ, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಅವೇಶ್ ಖಾನ್, ಅರ್ಶ್​ದೀಪ್ ಸಿಂಗ್ ಮತ್ತು ಸಂಜು ಸ್ಯಾಮ್ಸನ್ ಆಯ್ಕೆ ಆಗಿದ್ದಾರೆ.

2 / 8
ಏತನ್ಮಧ್ಯೆ, ಶಿವಂ ದುಬೆ, ಪ್ರಸಿದ್ಧ್ ಕೃಷ್ಣ ಮತ್ತು ವಾಷಿಂಗ್ಟನ್ ಸುಂದರ್ ಅವರ ಪುನರಾಗಮನ ಈ ಪಂದ್ಯಗಳ ಮೇಲೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಅಲ್ಲದೆ ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಸರಣಿ ಯುವ ಆಟಗಾರರಿಗೆ ಅಗ್ನಿಪರೀಕ್ಷೆಯಾಗಿದೆ.

3 / 8
ಮೊದಲ ಟಿ20 ಪಂದ್ಯ ನಡೆಯಲಿರುವ ವಿಲೇಜ್ ಕ್ರಿಕೆಟ್ ಸ್ಟೇಡಿಯಂನ ಇತ್ತೀಚಿನ ಟಿ20 ದಾಖಲೆಗಳನ್ನು ನೋಡುವುದಾದರೆ, ಈ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಈ ಮೈದಾನದಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 167 ಆಗಿದೆ.

4 / 8
ಪಂದ್ಯ ಸಾಗುತ್ತಿದ್ದಂತೆ ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ನಿರ್ಣಾಯಕ ಪಾತ್ರವನ್ನು ವಹಿಸಬಹುದಾದರೂ ಬೌಲರ್‌ಗಳಿಗೆ ಈ ಪಿಚ್ ದೊಡ್ಡ ಮಟ್ಟದಲ್ಲಿ ಸಹಾಯ ಮಾಡುವುದಿಲ್ಲ. ಚೇಸಿಂಗ್​ಗೆ ಈ ಪಿಚ್ ಹೆಸರುವಾಸಿಯಾಗಿರುವ ಕಾರಣ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ.

5 / 8
ಇನ್ನು ಡಬ್ಲಿನ್ ಹವಾಮಾನ ವರದಿಯ ಪ್ರಕಾರ, ಶುಕ್ರವಾರ, ಆಗಸ್ಟ್ 18 ರಂದು ಡಬ್ಲಿನ್‌ನ ದಿ ವಿಲೇಜ್‌ನಲ್ಲಿ ನಡೆಯುವ ಮೊದಲ ಟಿ20 ಪಂದ್ಯಕ್ಕೆ ಮಳೆ ವಿಲನ್ ಆಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಪಂದ್ಯದ ದಿನ 90 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಸುಮಾರು 6 ಮಿಮೀ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

6 / 8
ಜಸ್​ಪ್ರಿತ್ ಕಮ್​ಬ್ಯಾಕ್ ಟೀಮ್ ಇಂಡಿಯಾಕ್ಕೆ ಆನೆಬಲ ಬಂದಂತಾಗಿದೆ. ಸೆಪ್ಟೆಂಬರ್ 2022 ರಿಂದ ತಂಡದಿಂದ ಹೊರಗುಳಿದಿದ್ದ ಬುಮ್ರಾ, ಕಳೆದ ಬಾರಿಯ ಏಷ್ಯಾಕಪ್, ಟಿ20 ವಿಶ್ವಕಪ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಂತಹ ಪ್ರಮುಖ ಟೂರ್ನಿಗಳಿಂದ ಹೊರಗುಳಿದಿದ್ದರು. ಇದೀಗ ಐರ್ಲೆಂಡ್ ಸರಣಿ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

7 / 8
ಭಾರತೀಯ ಕಾಲಮಾನದ ಪ್ರಕಾರ ಭಾರತ ಹಾಗೂ ಐರ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ. ಇದರ ನೇರ ಪ್ರಸಾರದ ಹಕ್ಕು ವಯಾಕಾಮ್ 18 ಪಾಲಾಗಿದ್ದು ಸ್ಪೋರ್ಟ್ 18ನಲ್ಲಿ ಲೈವ್ ವೀಕ್ಷಿಸಬಹುದು. ಡಿಡಿ ಸ್ಪೋರ್ಟ್ಸ್​ನಲ್ಲಿ ಕೂಡ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ ಸ್ಟ್ರೀಮಿಂಗ್ ಇರಲಿದೆ.

8 / 8
Follow us
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು

ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ

ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ