- Kannada News Photo gallery Cricket photos These 4 players will play for india for the first time in t20 world cup
T20 World Cup 2024: ಟೀಂ ಇಂಡಿಯಾದ ಈ ನಾಲ್ವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್..!
T20 World Cup 2024: ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.
Updated on: May 29, 2024 | 10:17 PM

ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

ಸಂಜು ಸ್ಯಾಮ್ಸನ್: ದೇಶೀಯ ಕ್ರಿಕೆಟ್‌ನಿಂದ ಹಿಡಿದು ಐಪಿಎಲ್‌ವರೆಗೆ ಅದ್ಭುತ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಕೂಗು ಜೋರಾಗಿತ್ತು. ಈಗಷ್ಟೇ ಮುಗಿದ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಂಜು 500ಕ್ಕೂ ಹೆಚ್ಚು ರನ್ ಗಳಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಯಾಮ್ಸನ್ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ.

ಶಿವಂ ದುಬೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಶಿವಂ ದುಬೆ ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದರು. ಅದರಂತೆ ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದುಬೆಗೂ ಇದು ಚೊಚ್ಚಲ ಟಿ20 ವಿಶ್ವಕಪ್ ಆಗಿದೆ.

ಯಶಸ್ವಿ ಜೈಸ್ವಾಲ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಜೈಸ್ವಾಲ್ ಐಪಿಎಲ್‌ನಲ್ಲಿ ಶತಕ ಬಾರಿಸುವ ಮೂಲಕ ತಾನೊಬ್ಬ ಟಿ20 ಪ್ಲೇಯರ್ ಎಂಬುದನ್ನು ಸಾಭೀತುಪಡಿಸಿದ್ದರು. ಜೈಸ್ವಾಲ್ ಅಂಡರ್-19 ವಿಶ್ವಕಪ್‌ನಲ್ಲಿ ಆಡಿರುವ ಅನುಭವ ಹೊಂದಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದು ಅವರ ಮೊದಲ ವಿಶ್ವಕಪ್ ಆಗಿದೆ.

ಯುಜ್ವೇಂದ್ರ ಚಹಾಲ್: ಬಹಳ ವರ್ಷಗಳಿಂದ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ಗೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ.
























