T20 World Cup 2024: ಟೀಂ ಇಂಡಿಯಾದ ಈ ನಾಲ್ವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್..!

|

Updated on: May 29, 2024 | 10:17 PM

T20 World Cup 2024: ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

1 / 5
ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

2 / 5
ಸಂಜು ಸ್ಯಾಮ್ಸನ್: ದೇಶೀಯ ಕ್ರಿಕೆಟ್‌ನಿಂದ ಹಿಡಿದು ಐಪಿಎಲ್‌ವರೆಗೆ ಅದ್ಭುತ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಕೂಗು ಜೋರಾಗಿತ್ತು. ಈಗಷ್ಟೇ ಮುಗಿದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಂಜು 500ಕ್ಕೂ ಹೆಚ್ಚು ರನ್ ಗಳಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಯಾಮ್ಸನ್ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ.

3 / 5
ಶಿವಂ ದುಬೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಶಿವಂ ದುಬೆ ಈ ಬಾರಿಯ ಐಪಿಎಲ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದರು. ಅದರಂತೆ ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದುಬೆಗೂ ಇದು ಚೊಚ್ಚಲ ಟಿ20 ವಿಶ್ವಕಪ್ ಆಗಿದೆ.

4 / 5
ಯಶಸ್ವಿ ಜೈಸ್ವಾಲ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಜೈಸ್ವಾಲ್ ಐಪಿಎಲ್‌ನಲ್ಲಿ ಶತಕ ಬಾರಿಸುವ ಮೂಲಕ ತಾನೊಬ್ಬ ಟಿ20 ಪ್ಲೇಯರ್ ಎಂಬುದನ್ನು ಸಾಭೀತುಪಡಿಸಿದ್ದರು. ಜೈಸ್ವಾಲ್ ಅಂಡರ್-19 ವಿಶ್ವಕಪ್‌ನಲ್ಲಿ ಆಡಿರುವ ಅನುಭವ ಹೊಂದಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದು ಅವರ ಮೊದಲ ವಿಶ್ವಕಪ್ ಆಗಿದೆ.

5 / 5
ಯುಜ್ವೇಂದ್ರ ಚಹಾಲ್: ಬಹಳ ವರ್ಷಗಳಿಂದ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್​ಗೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ.