T20 World Cup 2024: ಐಪಿಎಲ್‌ನಲ್ಲಿ ಅಬ್ಬರಿಸಿದ ಈ ಐವರು ಟಿ20 ವಿಶ್ವಕಪ್​ನಲ್ಲಿ ಕಾಣಸಿಗುವುದಿಲ್ಲ..!

|

Updated on: May 29, 2024 | 7:23 PM

T20 World Cup 2024: ಐಪಿಎಲ್‌ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಅವಕಾಶ ಸಿಕ್ಕಿತ್ತು. ಆದರೆ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಈ ಐವರು ಕ್ರಿಕೆಟಿಗರು ಟಿ20 ವಿಶ್ವಕಪ್‌ನಲ್ಲಿ ಆಡುತ್ತಿಲ್ಲ.

1 / 6
ಟಿ20 ವಿಶ್ವಕಪ್ 2024 ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ. ಇದು ಜೂನ್ 1 ರಿಂದ ಪ್ರಾರಂಭವಾಗಲಿದೆ. ಟಿ20 ವಿಶ್ವಕಪ್‌ಗೂ ಮುನ್ನ ಎರಡು ತಿಂಗಳ ಕಾಲ ಐಪಿಎಲ್‌ ಆಡಲಾಗಿತ್ತು. ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಅವಕಾಶ ಸಿಕ್ಕಿತ್ತು. ಆದರೆ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಈ ಐವರು ಕ್ರಿಕೆಟಿಗರು ಟಿ20 ವಿಶ್ವಕಪ್‌ನಲ್ಲಿ ಆಡುತ್ತಿಲ್ಲ.

2 / 6
ಫಾಫ್ ಡು ಪ್ಲೆಸಿಸ್: ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಆರ್‌ಸಿಬಿ ಪ್ಲೇಆಫ್ ತಲುಪಿತ್ತು. ನಾಯಕತ್ವ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲಿ ಮಿಂಚಿದ್ದ ಫಾಫ್, 438 ರನ್‌ಗಳ ಕೊಡುಗೆ ನೀಡಿದ್ದರು. ಟಿ20 ಕ್ರಿಕೆಟ್​ಗೆ ಹೆಚ್ಚು ಗಮನ ಹರಿಸುವ ಸಲುವಾಗಿ ಫಾಫ್ ಟೆಸ್ಟ್‌ನಿಂದ ನಿವೃತ್ತರಾದರು. ಆದರೆ, ಅಂದಿನಿಂದ ಅವರು ಟಿ20 ಆಡಲು ದಕ್ಷಿಣ ಆಫ್ರಿಕಾ ತಂಡದಲ್ಲಿ ಆಯ್ಕೆಯಾಗಿಲ್ಲ.

3 / 6
ಹರ್ಷಲ್ ಪಟೇಲ್: ಪಂಜಾಬ್ ಕಿಂಗ್ಸ್ ವೇಗದ ಬೌಲರ್ ಹರ್ಷಲ್ ಪಟೇಲ್ ಈ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಕೂಡ ಗೆದ್ದರು. ಆಡಿದ 14 ಪಂದ್ಯಗಳಲ್ಲಿ ಹರ್ಷಲ್ 24 ವಿಕೆಟ್‌ಗಳನ್ನು ಕಬಳಿಸಿದ್ದರು. ಇದಾದ ನಂತರವೂ ಹರ್ಷಲ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಲಿಲ್ಲ.

4 / 6
ರುತುರಾಜ್ ಗಾಯಕವಾಡ: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಟೀಂ ಇಂಡಿಯಾ ನಾಯಕತ್ವವನ್ನೂ ವಹಿಸಿದ್ದಾರೆ. ಅಲ್ಲದೆ ಈ ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಕೂಡ ಆಗಿದ್ದಾರೆ. ಆಡಿದ 14 ಪಂದ್ಯಗಳಲ್ಲಿ ರುತುರಾಜ್ 583 ರನ್ ಗಳಿಸಿದ್ದಾರೆ. ಇದರಲ್ಲಿ ಶತಕದ ಇನ್ನಿಂಗ್ಸ್ ಕೂಡ ಸೇರಿದೆ. ಇದರ ಹೊರತಾಗಿಯೂ ಅವರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಲಿಲ್ಲ.

5 / 6
ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್: ಆಸ್ಟ್ರೇಲಿಯಾದ ಜಾಕ್ ಫ್ರೇಸರ್ ಮೆಕ್‌ಗುರ್ಕ್ ಈ ಬಾರಿಯ ಐಪಿಎಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು ಆಡಿದ 9 ಪಂದ್ಯಗಳಲ್ಲಿ, ಅವರು 234 ಸ್ಟ್ರೈಕ್ ರೇಟ್‌ನಲ್ಲಿ 330 ರನ್ ಬಾರಿಸಿರು. ಈ ಪ್ರದರ್ಶನದ ನಂತರವೂ ಆಸ್ಟ್ರೇಲಿಯಾ ವಿಶ್ವಕಪ್ ತಂಡದಲ್ಲಿ ಮೆಕ್‌ಗುರ್ಕ್‌ಗೆ ಸ್ಥಾನ ನೀಡಿಲ್ಲ. ಬದಲಿಗೆ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.

6 / 6
ಸುನಿಲ್ ನರೈನ್: ಐಪಿಎಲ್‌ನಲ್ಲಿ ಆಲ್​ರೌಂಡರ್ ಪ್ರದರ್ಶನ ನೀಡಿದ ಸುನಿಲ್ ನರೈನ್ ಬ್ಯಾಟಿಂಗ್​ನಲ್ಲಿ 488 ರನ್ ಬಾರಿಸಿದರೆ, ಬೌಲಿಂಗ್‌ನಲ್ಲಿ 17 ವಿಕೆಟ್ ಉರುಳಿಸಿದರು. ಹೀಗಾಗಿ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್‌ಮನ್ ಪೊವೆಲ್ ಅವರು ನರೈನ್ ಟಿ20 ವಿಶ್ವಕಪ್ ಆಡಬೇಕೆಂದು ಒತ್ತಾಯಿಸಿದರು. ಅಲ್ಲದೆ ನರೈನ್ ಮನವೊಲಿಸಲು ಸಾಕಷ್ಟು ಪ್ರಯತ್ನಗಳು ನಡೆದವು. ಇದಾದ ನಂತರವೂ ಅವರು ಟಿ20 ವಿಶ್ವಕಪ್ ಆಡಲು ನಿರಾಕರಿಸಿದರು.