AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ, ಎರಡಲ್ಲ…ಬಾಬರ್​ ಬ್ಯಾಟ್​ನಿಂದ 4 ಶತಕಗಳು ಖಚಿತ ಎಂದ ಗಂಭೀರ್

Babar Azam: ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕಗಳನ್ನು ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಚೊಚ್ಚಲ ಬಾರಿ ಭಾರತದಲ್ಲಿ ಪಂದ್ಯವಾಡಲು ಸಜ್ಜಾಗಿರುವ ಬಾಬರ್ ಕಡೆಯಿಂದ ಅದ್ಭುತ ಪ್ರದರ್ಶನ ಮೂಡಿಬರಲಿದೆ ಎಂದಿದ್ದಾರೆ ಗಂಭೀರ್,

TV9 Web
| Edited By: |

Updated on: Oct 02, 2023 | 8:29 PM

Share
ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

1 / 6
ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲಿದ್ದಾರೆ ಎಂದಿದ್ದರು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿರುವ ಗೌತಿ, ಪಾಕ್ ನಾಯಕನ ಬ್ಯಾಟ್​ನಿಂದ ಮೂಡಿಬರಲಿರುವ ಶತಕಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

2 / 6
ನನ್ನ ಪ್ರಕಾರ, ಈ ಬಾರಿ ಬಾಬರ್ ಆಝಂ ಬ್ಯಾಟ್​ನಿಂದ ಶತಕಗಳು ಮೂಡಿ ಬರುವುದು ಖಚಿತ. ಭಾರತದ ಪಿಚ್​ನಲ್ಲಿ ಪಾಕ್ ತಂಡದ ನಾಯಕ  ಕನಿಷ್ಠ ಎಂದರೂ 3 ರಿಂದ 4 ಶತಕಗಳನ್ನು ಸಿಡಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

3 / 6
ಇದಕ್ಕೂ ಮುನ್ನ ಬಾಬರ್ ಆಝಂ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಗಳಿದ್ದ ಗಂಭೀರ್, ನಾನು ನೋಡಿದ ಕೆಲವೇ ಕೆಲವು ಆಟಗಾರರಲ್ಲಿ ಬಾಬರ್ ಕೂಡ ಒಬ್ಬರು. ಚೆಂಡನ್ನು ಬಾರಿಸಲು ಆತ ತೆಗೆದುಕೊಳ್ಳುವ ಟೈಮಿಂಗ್ ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಬ್ಬರಿಸುವುದನ್ನು ಎದುರು ನೋಡಬಹುದು ಎಂದಿದ್ದರು.

4 / 6
ಇದೀಗ ಚೊಚ್ಚಲ ಬಾರಿಗೆ ಭಾರತದಲ್ಲಿ ಪಂದ್ಯವಾಡುತ್ತಿರುವ ಪಾಕ್ ತಂಡದ ಬಾಬರ್​ ಆಝಂರಿಂದ ಮೂರರಿಂದ ನಾಲ್ಕು ಶತಕಗಳನ್ನು ಎದುರು ನೋಡಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ಬೆಂಕಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

5 / 6
ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಗೌತಮ್ ಗಂಭೀರ್ ಅವರ ಭವಿಷ್ಯದಂತೆ, ಈ ಬಾರಿ ಬಾಬರ್​ ಬ್ಯಾಟ್​ನಿಂದ ಮೂರರಿಂದ ನಾಲ್ಕು ಶತಕಗಳು ಮೂಡಿಬರಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌