IND vs WI: ಉಳಿದಿರುವ 2 ಟಿ20 ಪಂದ್ಯಗಳಲ್ಲಿ ಕಿಂಗ್ ಕೊಹ್ಲಿ ದಾಖಲೆ ಮುರಿಯಲು ಸಜ್ಜಾದ ತಿಲಕ್ ವರ್ಮಾ!

Tilak Varma: ಪ್ರಸ್ತುತ ನಡೆಯುತ್ತಿರುವ ಟಿ20 ಸರಣಿಯಲ್ಲಿ ಆಡಿರುವ ಮೂರು ಇನ್ನಿಂಗ್ಸ್‌ಗಳಲ್ಲಿ ತಿಲಕ್, 69.50 ಸರಾಸರಿ ಮತ್ತು 139.00 ಸ್ಟ್ರೈಕ್ ರೇಟ್‌ನಲ್ಲಿ 139 ರನ್ ಕಲೆಹಾಕಿದ್ದಾರೆ. ಸರಣಿಯಲ್ಲಿ ಇನ್ನು 2 ಪಂದ್ಯಗಳು ಬಾಕಿ ಉಳಿದಿದ್ದು, ಈ ಪಂದ್ಯಗಳಲ್ಲಿ ತಿಲಕ್ ಮಂಚಿದರೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ ವಿರಾಟ್ ಕೊಹ್ಲಿ ದಾಖಲೆಯನ್ನು ತಿಲಕ್ ಮುರಿಯುವ ಅವಕಾಶ ಹೊಂದಿದ್ದಾರೆ.

ಪೃಥ್ವಿಶಂಕರ
|

Updated on: Aug 10, 2023 | 12:01 PM

ಮಂಗಳವಾರ, ಆಗಸ್ಟ್ 8 ರಂದು ನಡೆದ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಟಿ20 ಪಂದ್ಯವನ್ನು ಗೆದ್ದು ಬೀಗಿದ ಟೀಂ ಇಂಡಿಯಾ ಸರಣಿಯನ್ನು ಜೀವಂತವಾಗಿರಿಸಿದೆ. ತಂಡದ ಪರ ಸೂರ್ಯಕುಮಾರ್ ಯಾದವ್ 44 ಎಸೆತಗಳಲ್ಲಿ 83 ರನ್ ಸಿಡಿಸಿದರೆ, ಕುಲ್ದೀಪ್ ಯಾದವ್ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದರು.

1 / 8
ಈ ಇಬ್ಬರನ್ನು ಹೊರತುಪಡಿಸಿ ನಿರ್ಣಾಯಕ ಅಜೇಯ ಇನ್ನಿಂಗ್ಸ್ ಆಡಿದ್ದ ತಿಲಕ್ ವರ್ಮಾ ಟೀಂ ಇಂಡಿಯಾದ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಈ ಯುವ ಬ್ಯಾಟರ್ 37 ಎಸೆತಗಳಲ್ಲಿ ಅಜೇಯ 49 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.

2 / 8
ಪ್ರಸ್ತುತ ನಡೆಯುತ್ತಿರುವ ಟಿ20 ಸರಣಿಯಲ್ಲಿ ಆಡಿರುವ ಮೂರು ಇನ್ನಿಂಗ್ಸ್‌ಗಳಲ್ಲಿ ತಿಲಕ್, 69.50 ಸರಾಸರಿ ಮತ್ತು 139.00 ಸ್ಟ್ರೈಕ್ ರೇಟ್‌ನಲ್ಲಿ 139 ರನ್ ಕಲೆಹಾಕಿದ್ದಾರೆ. ಸರಣಿಯಲ್ಲಿ ಇನ್ನು 2 ಪಂದ್ಯಗಳು ಬಾಕಿ ಉಳಿದಿದ್ದು, ಈ ಪಂದ್ಯಗಳಲ್ಲಿ ತಿಲಕ್ ಮಂಚಿದರೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ ವಿರಾಟ್ ಕೊಹ್ಲಿ ದಾಖಲೆಯನ್ನು ತಿಲಕ್ ಮುರಿಯುವ ಅವಕಾಶ ಹೊಂದಿದ್ದಾರೆ.

3 / 8
ಟಿ20 ಮಾದರಿಯಲ್ಲಿ ವಿರಾಟ್ ಕೊಹ್ಲಿ ಹೆಚ್ಚಿನ ದಾಖಲೆಗಳನ್ನು ಹೊಂದಿದ್ದು, ಇದರಲ್ಲಿ ವೃತ್ತಿಜೀವನದ ಹೆಚ್ಚು ರನ್ ಗಳಿಸಿದ ದಾಖಲೆಯೂ ಸೇರಿದೆ. ಮಾರ್ಚ್ 2021 ರಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಅಜೇಯ ಅರ್ಧಶತಕ ಸಿಡಿಸಿದ್ದ ಕೊಹ್ಲಿ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 231 ರನ್ ದಾಖಲಿಸಿದ್ದರು. ಇದರೊಂದಿಗೆ ಐದು ಪಂದ್ಯಗಳ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ.

4 / 8
ಇನ್ನು ಐದು ಪಂದ್ಯಗಳ ದ್ವಿಪಕ್ಷೀಯ ಟಿ20 ಸರಣಿಯಲ್ಲಿ 200 ಕ್ಕೂ ಹೆಚ್ಚು ರನ್ ಗಳಿಸಿದ ಇತರ ಆಟಗಾರರ ಪೈಕಿ ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಆರಂಭಿಕ ಬ್ಯಾಟರ್ ನ್ಯೂಜಿಲೆಂಡ್ ವಿರುದ್ಧ ಆಡಿದ್ದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 224 ರನ್ ಕಲೆಹಾಕಿದ್ದರು.

5 / 8
ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಯುವ ಬ್ಯಾಟರ್ ಇಶಾನ್ ಕಿಶನ್, ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 206 ರನ್ ಕಲೆಹಾಕಿದ್ದರು.

6 / 8
ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಇದ್ದು, ಈ ಮಧ್ಯಮ ಕ್ರಮಾಂಕದ ಬ್ಯಾಟರ್ ನ್ಯೂಜಿಲೆಂಡ್ ವಿರುದ್ಧ 153 ರನ್ ಬಾರಿಸಿದ್ದರು.

7 / 8
ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ಆಡುತ್ತಿರುವ ತಿಲಕ್ ವರ್ಮಾಗೆ ಈ ದಾಖಲೆಯನ್ನು ಮುರಿಯಲು ಕೇವಲ 92 ರನ್‌ಗಳ ಅಗತ್ಯವಿದೆ. ಪ್ರಸ್ತುತ ತಿಲಕ್ ಆಡಿರುವ ಮೂರು ಪಂದ್ಯಗಳಿಂದ 139 ರನ್ ಕಲೆಹಾಕಿದ್ದಾರೆ.

8 / 8
Follow us
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!