AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಭಾರತ ತಂಡದ ಇಬ್ಬರು ಡೌಟ್

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡವು ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ತಂಡದಿಂದ ಇಬ್ಬರು ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jan 15, 2026 | 2:00 PM

Share
ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ವಿಶ್ವಕಪ್ ಟೂರ್ನಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದು ಸಹ ಗಾಯದ ಕಾರಣ..!

1 / 6
ಟಿ20 ವಿಶ್ವಕಪ್ ಟೂರ್ನಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆಯಾಗಿರುವ ಎಡಗೈ ದಾಂಡಿಗ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ಆಸ್ಪತ್ರೆಗೆ ದಾಖಲಾಗಿದ್ದು, ನೋವಿನ ಸಮಸ್ಯೆಗೆ ಸರ್ಜರಿ ಮಾಡಿಸಿಕೊಂಡಿದ್ದಾರೆ.

2 / 6
ಹೀಗಾಗಿ ತಿಲಕ್ ವರ್ಮಾ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಅತ್ತ ನ್ಯೂಝಿಲೆಂಡ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಟಿ20 ವಿಶ್ವಕಪ್​ಗೆ ಸಜ್ಜಾಗಲಿದೆ. ಹೀಗಾಗಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಿಲಕ್ ವರ್ಮಾ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

3 / 6
ಮತ್ತೊಂದೆಡೆ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಪೆಕ್ಕೆಲುಬಿಗೆ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಕಿವೀಸ್ ವಿರುದ್ಧದ 2 ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅಲ್ಲದೆ ಮುಂಬರುವ ಟಿ20 ಸರಣಿಯಲ್ಲೂ ಸುಂದರ್ ಕಾಣಿಸಿಕೊಳ್ಳುವುದು ಡೌಟ್.

4 / 6
ಅಂದರೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತಿಲಕ್ ವರ್ಮಾ ಹಾಗೂ ವಾಷಿಂಗ್ಟರ್ ಸುಂದರ್ ಕಣಕ್ಕಿಳಿಯುವುದು ಅನುಮಾನ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಬೇಕಿರುವುದರಿಂದ ಇಬ್ಬರ ಬದಲಿಗೆ ಶೀಘ್ರದಲ್ಲೇ ಬದಲಿ ಆಟಗಾರರನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ತಿಲಕ್ ವರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳದಿದ್ದರೂ ಅಚ್ಚರಿಪಡಬೇಕಿಲ್ಲ.

5 / 6
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್

ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?