ಹ್ಯಾಟ್ರಿಕ್ ಸೆಂಚುರಿ: ಹೊಸ ದಾಖಲೆ ಬರೆದ ತಿಲಕ್ ವರ್ಮಾ
TV9 Web | Updated By: ಝಾಹಿರ್ ಯೂಸುಫ್
Updated on:
Nov 23, 2024 | 12:57 PM
Hyderabad vs Meghalaya: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್ ಎ ಪಂದ್ಯದಲ್ಲಿ ಮೈಘಾಲಯ ವಿರುದ್ಧ ಹೈದರಾಬಾದ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಪರ ತಿಲಕ್ ವರ್ಮಾ ಸ್ಪೋಟಕ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ.
1 / 7
ಟೀಮ್ ಇಂಡಿಯಾದ ಯುವ ದಾಂಡಿಗ ತಿಲಕ್ ವರ್ಮಾ ತಮ್ಮ ಭರ್ಜರಿ ಫಾರ್ಮ್ ಮುಂದುವರೆಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ 2 ಶತಕ ಸಿಡಿಸಿ ಮಿಂಚಿದ್ದ ತಿಲಕ್ ವರ್ಮಾ ಇದೀಗ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲೂ ಸೆಂಚುರಿ ಬಾರಿಸಿ ಅಬ್ಬರಿಸಿದ್ದಾರೆ.
2 / 7
ರಾಜ್ಕೋಟ್ನಲ್ಲಿ ನಡೆದ ಈ ಪಂದ್ಯದಲ್ಲಿ ಹೈದರಾಬಾದ್ ಮತ್ತು ಮೆಘಾಲಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಘಾಲಯ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಹೈದರಾಬಾದ್ ತಂಡಕ್ಕೆ ತನ್ವಯ್ ಅಗರ್ವಾಲ್ (55) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್ ವರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
3 / 7
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ತಿಲಕ್ ವರ್ಮಾ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಈ ಮೂಲಕ ಕೇವಲ 67 ಎಸೆತಗಳಲ್ಲಿ 10 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ 151 ರನ್ ಚಚ್ಚಿದರು.
4 / 7
ಈ 151 ರನ್ಗಳೊಂದಿಗೆ ಸೈಯ್ಯದ್ ಮುಷ್ತಾಲ್ ಅಲಿ ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ತಿಲಕ್ ವರ್ಮಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಮುಂಬೈನ ಶ್ರೇಯಸ್ ಅಯ್ಯರ್ ಹೆಸರಿನಲ್ಲಿತ್ತು.
5 / 7
2019 ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ಶ್ರೇಯಸ್ ಅಯ್ಯರ್ 55 ಎಸೆತಗಳಲ್ಲಿ 147 ರನ್ ಬಾರಿಸಿದ್ದರು. ಈ ಮೂಲಕ ದೇಶೀಯ ಅಂಗಳದ ಟಿ20 ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.
6 / 7
ಇದೀಗ 151 ರನ್ಗಳೊಂದಿಗೆ ತಿಲಕ್ ವರ್ಮಾ ಶ್ರೇಯಸ್ ಅಯ್ಯರ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಅಲ್ಲದೆ ದೇಶೀಯ ಟಿ20 ಟೂರ್ನಿಯಲ್ಲಿ 150+ ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.
7 / 7
ಇನ್ನು ತಿಲಕ್ ವರ್ಮಾ ಅವರ ಈ ಭರ್ಜರಿ ಶತಕದ ನೆರವಿನಿಂದ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮೆಘಾಲಯ ಕೇವಲ 69 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಹೈದರಾಬಾದ್ ತಂಡವು 179 ರನ್ಗಳ ಅಮೋಘ ಗೆಲುವು ದಾಖಲಿಸಿದೆ.