AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ದಾಖಲೆಗಳು ಧೂಳೀಪಟ: ಹೊಸ ದಾಖಲೆಗೆ ತಿಲಕವಿಟ್ಟ ತಿಲಕ್ ವರ್ಮಾ

South Africa vs India: ಸೌತ್ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದರೆ, 2ನೇ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸತ್ತು. ಇನ್ನು 3ನೇ ಮತ್ತು 4ನೇ ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Nov 16, 2024 | 9:32 AM

Share
ಸೌತ್ ಆಫ್ರಿಕಾ ವಿರುದ್ಧದ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ತಿಲಕ್ ವರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಎರಡು ಭರ್ಜರಿ ದಾಖಲೆಗಳನ್ನು ಯುವ ಎಡಗೈ ದಾಂಡಿಗ ತಮ್ಮದಾಗಿಸಿಕೊಂಡಿದ್ದಾರೆ.

1 / 7
ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 47 ಎಸೆತಗಳಲ್ಲಿ 10 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 120 ರನ್ ಬಾರಿಸಿದ್ದರು. ಇದಕ್ಕೂ ಮುನ್ನ 3ನೇ ಟಿ20 ಪಂದ್ಯದಲ್ಲಿ ಅಜೇಯ 107 ರನ್ ಸಿಡಿಸಿದ್ದರು.

2 / 7
ಈ ಎರಡು ಭರ್ಜರಿ ಶತಕಗಳೊಂದಿಗೆ ಸೌತ್ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಸರಣಿಯಲ್ಲಿ ತಿಲಕ್ ವರ್ಮಾ 280 ರನ್ ಕಲೆಹಾಕಿದ್ದಾರೆ. ಇದರೊಂದಿಗೆ ದ್ವಿಪಕ್ಷೀಯ ಟಿ20 ಸರಣಿಯೊಂದರಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ತಿಲಕ್ ವರ್ಮಾ ಪಾಲಾಗಿದೆ.

3 / 7
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. 2021 ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20  ಸರಣಿಯಲ್ಲಿ ಕೊಹ್ಲಿ ಒಟ್ಟು 231 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 280 ರನ್​ಗಳೊಂದಿಗೆ ತಿಲಕ್ ವರ್ಮಾ ಈ ದಾಖಲೆ ಮುರಿದಿದ್ದಾರೆ.

4 / 7
ಇನ್ನು ಈ ಸರಣಿಯಲ್ಲಿ ತಿಲಕ್ ವರ್ಮಾ ಬ್ಯಾಟ್​ನಿಂದ ಮೂಡಿಬಂದ ಒಟ್ಟು ಸಿಕ್ಸ್​ಗಳ ಸಂಖ್ಯೆ 20. ಮೊದಲೆರಡು ಟಿ20 ಪಂದ್ಯಗಳಲ್ಲಿ 3 ಸಿಕ್ಸ್ ಬಾರಿಸಿದ್ದ ತಿಲಕ್, ಮೂರನೇ ಪಂದ್ಯದಲ್ಲಿ 7 ಸಿಕ್ಸ್​ ಸಿಡಿಸಿದ್ದರು. ಇದೀಗ 4ನೇ ಪಂದ್ಯದಲ್ಲಿ 10 ಸಿಕ್ಸ್ ಬಾರಿಸುವ ಮೂಲಕ ಭಾರತದ ಪರ ದ್ವಿಪಕ್ಷೀಯ ಸರಣಿಯಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಅಂದಹಾಗೆ ಈ ದಾಖಲೆ ಕೂಡ ವಿರಾಟ್ ಕೊಹ್ಲಿಯ ಹೆಸರಿನಲ್ಲಿಯೇ ಇತ್ತು. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ 13 ಸಿಕ್ಸ್ ಸಿಡಿಸಿ ಈ ರೆಕಾರ್ಡ್ ನಿರ್ಮಿಸಿದ್ದರು. ಇದೀಗ 20 ಸಿಕ್ಸ್​ಗಳೊಂದಿಗೆ ತಿಲಕ್ ವರ್ಮಾ ದ್ವಿಪಕ್ಷೀಯ ಸರಣಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

6 / 7
ಹಾಗೆಯೇ ಈ ಭರ್ಜರಿ ಪ್ರದರ್ಶನದೊಂದಿಗೆ ತಿಲಕ್ ವರ್ಮಾ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಿ20 ಸರಣಿಯಲ್ಲಿ ಭಾರತದ ಪರ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ತಿಲಕ್ ವರ್ಮಾ ಅವರು ತಮ್ಮ 22ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.

7 / 7
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?