AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜೇಯ ರನ್​ ಸರದಾರ… ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ತಿಲಕ್ ವರ್ಮಾ

Tilak Varma Records: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 165 ರನ್ ಬಾರಿಸಿದರೆ, ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 166 ರನ್​ ಗಳಿಸಿ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ತಿಲಕ್ ವರ್ಮಾ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 26, 2025 | 8:30 AM

Share
ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರಡು ಔಟ್​ಗಳ ನಡುವೆ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ತಿಲಕ್ ವರ್ಮಾ ಪಾಲಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ತಿಲಕ್ ವರ್ಮಾ 55 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದರು.

1 / 5
ಈ 72 ರನ್​​ಗಳೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಎರಡು ಔಟ್​​ಗಳ ನಡುವೆ ಅಜೇಯರಾಗಿ ಉಳಿದು ಅತೀ ಹೆಚ್ಚು ರನ್ ಬಾರಿಸಿದ ವಿಶ್ವ ದಾಖಲೆಯನ್ನು ತಿಲಕ್ ವರ್ಮಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ಅಪರೂಪದ ವರ್ಲ್ಡ್ಡ್ ರೆಕಾರ್ಡ್​ ನ್ಯೂಝಿಲೆಂಡ್​ನ ಮಾರ್ಕ್​ ಚಾಪ್ಮನ್ ಹೆಸರಿನಲ್ಲಿತ್ತು.

2 / 5
2023 ರಲ್ಲಿ ಮಾರ್ಕ್​ ಚಾಪ್ಮನ್ ಎರಡು ಔಟ್​ಗಳ ನಡುವೆ 271 (65*, 16*, 71*, 104*, 15) ರನ್ ಕಲೆಹಾಕಿದ್ದರು. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಮ್ಮೆ ಔಟಾದ ಬಳಿಕ ಮತ್ತೊಮ್ಮೆ ಔಟಾಗುವುದರೊಂದಿಗೆ ಅತೀ ಹೆಚ್ಚು ರನ್ ಪೇರಿಸಿದ ದಾಖಲೆಯನ್ನು ಮಾರ್ಕ್​ ಚಾಪ್ಮನ್ ಬರೆದಿದ್ದರು.

3 / 5
ಇದೀಗ ಈ ಅಜೇಯ ರನ್​ ಸರದಾರನ ದಾಖಲೆಯನ್ನು ತಿಲಕ್ ವರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಎರಡು ಅಜೇಯ ಶತಕಗಳನ್ನು (120*, 107*) ಬಾರಿಸಿದ್ದ ತಿಲಕ್ ವರ್ಮಾ, ಇಂಗ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಅಜೇಯ 19* ಮತ್ತು ಎರಡನೇ ಮ್ಯಾಚ್​ನಲ್ಲಿ ಅಜೇಯ 72* ರನ್ ಕಲೆಹಾಕಿದ್ದಾರೆ.

4 / 5
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಎರಡು ಔಟ್​ಗಳ ನಡುವೆ 318* ಬಾರಿಸಿ, ತಿಲಕ್ ವರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷ ಎಂದರೆ ಕಳೆದ 4 ಇನಿಂಗ್ಸ್​ಗಳಲ್ಲಿ ತಿಲಕ್ ಔಟ್ ಆಗಿಲ್ಲ. ಹೀಗಾಗಿ ಈ ದಾಖಲೆ ಮುಂದಿನ ಪಂದ್ಯದಲ್ಲೂ ಮುಂದುವರೆಯಲಿದೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಎರಡು ಔಟ್​ಗಳ ನಡುವೆ ತಿಲಕ್ ವರ್ಮಾ ಎಷ್ಟು ರನ್ ಕಲೆಹಾಕಲಿದ್ದಾರೆ ಎಂಬುದನ್ನು ಕಾದು ನೋಡೋಣ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ