AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tilak Varma: ಬ್ಯಾಕ್ ಟು ಬ್ಯಾಕ್ ದಾಖಲೆ ಬರೆದ ತಿಲಕ್ ವರ್ಮಾ

Tilak Varma's Record: ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ತಿಲಕ್ ವರ್ಮಾ 2 ದಾಖಲೆಗಳನ್ನು ಬರೆದಿದ್ದಾರೆ.

TV9 Web
| Edited By: |

Updated on: Aug 06, 2023 | 10:33 PM

Share
India vs West Indies 2nd T20: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿ ತಿಲಕ್ ವರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಗಯಾನಾದಲ್ಲಿ ನಡೆದ ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ಎಡಗೈ ದಾಂಡಿಗ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು.

1 / 7
ಈ ಪಂದ್ಯದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ತಿಲಕ್ ವರ್ಮಾ 39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 20ನೇ ವಯಸ್ಸಿನಲ್ಲಿ ಹಾಫ್ ಸೆಂಚುರಿ ಸಿಡಿಸಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 7
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ರೋಹಿತ್ ಶರ್ಮಾ. 2007 ರ ಟಿ20 ವಿಶ್ವಕಪ್​ನಲ್ಲಿ ಹಿಟ್​ಮ್ಯಾನ್ ಚೊಚ್ಚಲ ಅರ್ಧಶತಕ ಬಾರಿಸಿದ್ದರು. ಈ ಮೂಲಕ ತಮ್ಮ 20ನೇ ವಯಸ್ಸಿನಲ್ಲಿ ಹಾಫ್ ಸೆಂಚುರಿ ರೋಹಿತ್ ಶರ್ಮಾ ದಾಖಲೆ ಬರೆದಿದ್ದರು.

3 / 7
ಇದೀಗ ತಿಲಕ್ ವರ್ಮಾ ಕೂಡ 20ನೇ ವಯಸ್ಸಿನಲ್ಲೇ ತಮ್ಮ ಚೊಚ್ಚಲ ಅರ್ಧಶತಕ ಬಾರಿಸಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ಸಿಡಿಸಿ 2ನೇ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

4 / 7
ಈ ದಾಖಲೆಯ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿರುವುದು ರೋಹಿತ್ ಶರ್ಮಾ. 20 ವರ್ಷ, 143 ದಿನಗಳಾಗಿದ್ದಾಗ ಹಿಟ್​ಮ್ಯಾನ್ ತಮ್ಮ ಚೊಚ್ಚಲ ಅರ್ಧಶತಕ ಬಾರಿಸಿದ್ದರು. ಇದೀಗ 20 ವರ್ಷ, 271 ದಿನಗಳಲ್ಲಿ ತಿಲಕ್ ವರ್ಮಾ ಹಾಫ್ ಸೆಂಚುರಿ ಸಿಡಿಸಿ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 7
ತಿಲಕ್ ವರ್ಮಾ ತಾವು ಆಡಿದ ಮೊದಲೆರಡು ಟಿ20 ಪಂದ್ಯಗಳಲ್ಲೂ ದಾಖಲೆ ಬರೆದಿರುವುದು ವಿಶೇಷ. ಅಂದರೆ ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 177.27 ಸ್ಟ್ರೈಕ್​ ರೇಟ್​ನಲ್ಲಿ 39 ರನ್ ಬಾರಿಸಿದ್ದರು.

6 / 7
ಈ ಮೂಲಕ ಇಶಾನ್ ಕಿಶನ್ (175.00) ಹೆಸರಿನಲ್ಲಿದ್ದ ಚೊಚ್ಚಲ ಪಂದ್ಯದ ಅತ್ಯುತ್ತಮ ಸ್ಟ್ರೈಕ್ ರೇಟ್​ ದಾಖಲೆಯನ್ನು ತಿಲಕ್ ವರ್ಮಾ ಮುರಿದಿದ್ದರು. ಇದೀಗ 2ನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಬ್ಯಾಕ್ ಟು ಬ್ಯಾಕ್ ದಾಖಲೆಗಳನ್ನು ಬರೆದಿರುವುದು ವಿಶೇಷ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್