Ranji Trophy 2024: ರಣಜಿಯಲ್ಲಿ ಸತತ ಎರಡನೇ ಶತಕ ಸಿಡಿಸಿದ ತಿಲಕ್ ವರ್ಮಾ

Ranji Trophy 2024: ಸಿಕ್ಕಿಂ ವಿರುದ್ಧದ ಈ ಪಂದ್ಯದಲ್ಲಿ ಹೈದರಾಬಾದ್ ತಂಡದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ನಾಯಕ ತಿಲಕ್ ವರ್ಮಾ 111 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 103 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

ಪೃಥ್ವಿಶಂಕರ
|

Updated on: Jan 20, 2024 | 3:49 PM

ನಡೆಯುತ್ತಿರುವ ರಣಜಿ ಟ್ರೋಫಿ 2024ರ ಸೀಸನ್​ನಲ್ಲಿ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿರುವ ಎಡಗೈ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಈ ಆವೃತ್ತಿಯ ಸತತ ಎರಡನೇ ಶತಕ ಸಿಡಿಸಿದ್ದಾರೆ.

1 / 7
ಹೈದರಾಬಾದ್ ತಂಡ ಈ ಬಾರಿಯ ರಣಜಿ ಟ್ರೋಫಿಯ ಮೂರನೇ ಪಂದ್ಯವನ್ನು ಸಿಕ್ಕಿಂ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಸಿಕ್ಕಿಂ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 79 ರನ್‌ಗಳಿಗೆ ಆಲೌಟ್ ಆಯಿತು. ಇದರ ನಂತರ, ಮೊದಲ ಇನ್ನಿಂಗ್ಸ್ ಆರಂಭಿಸಿದ ಹೈದರಾಬಾದ್ ತಂಡ 463 ರನ್​ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

2 / 7
ಸಿಕ್ಕಿಂ ವಿರುದ್ಧದ ಈ ಪಂದ್ಯದಲ್ಲಿ ಹೈದರಾಬಾದ್ ತಂಡದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ನಾಯಕ ತಿಲಕ್ ವರ್ಮಾ 111 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 103 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

3 / 7
ಇವರಲ್ಲದೇ, ತನ್ಮಯ್ ಅಗರ್ವಾಲ್ ಕೂಡ ಹೈದರಾಬಾದ್‌ ಪರ 137 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರೆ, ರಾಹುಲ್ ಸಿಂಗ್ 83 ರನ್‌ಗಳ ಇನಿಂಗ್ಸ್ ಆಡಿದರು. ಹೀಗಾಗಿ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಸಿಕ್ಕಿಂ ವಿರುದ್ಧ ಭಾರಿ ಮುನ್ನಡೆ ಕಾಯ್ದುಕೊಂಡಿದೆ.

4 / 7
ಇನ್ನು ರಣಜಿಯಲ್ಲಿ ತಿಲಕ್ ವರ್ಮಾ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಸೀಸನ್​ನ ಮೊದಲ ಪಂದ್ಯದಲ್ಲಿ ಅಂದರೆ ನಾಗಾಲ್ಯಾಂಡ್ ವಿರುದ್ಧದ ಪಂದ್ಯದಲ್ಲೂ ತಿಲಕ್ 100 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಆದರೆ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿದ್ದ ಟಿ20 ಸರಣಿಯಲ್ಲಿ ಭಾರತ ತಂಡದ ಭಾಗವಾಗಿದ್ದ ಕಾರಣ ತಿಲಕ್‌ಗೆ ಎರಡನೇ ರಣಜಿ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ.

5 / 7
ಪ್ರಸ್ತುತ ರಣಜಿಯಲ್ಲಿ ಶತಕ ಸಿಡಿಸಿರುವ ತಿಲಕ್ ವರ್ಮಾ ಭಾರತ ಟಿ20 ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧದ 3ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಹೊರಗಿಡಲಾಯಿತು

6 / 7
ಈ ಸರಣಿಗೂ ಮುನ್ನ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲೂ ತಿಲಕ್ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಹೀಗಾಗಿ ಟೀಂ ಇಂಡಿಯಾದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ತಿಲಕ್​ಗೆ ಈ ಎರಡು ಬ್ಯಾಕ್​ ಟು ಬ್ಯಾಕ್ ಶತಕಗಳು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲಿವೆ.

7 / 7
Follow us