- Kannada News Photo gallery Cricket photos Tilak Varma Recods: Indian players who scored the most runs in 5 consecutive innings each format
ವಿಶೇಷ ಸಾಧಕರ ಪಟ್ಟಿಗೆ ತಿಲಕ್ ವರ್ಮಾ ಎಂಟ್ರಿ
Tilak Varma Recods: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಜೇಯರಾಗಿ ಉಳಿದು ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದ್ದ ತಿಲಕ್ ವರ್ಮಾ ಇದೀಗ ಸತತ 5 ಇನಿಂಗ್ಸ್ಗಳಲ್ಲಿ ಅತೀ ಹೆಚ್ಚು ರನ್ಗಳಿಸಿದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ವಿನೋದ್ ಕಾಂಬ್ಳಿ ಇರುವ ಎಲೈಟ್ ಲಿಸ್ಟ್ಗೆ ಸೇರ್ಪಡೆಯಾಗಿದ್ದಾರೆ.
Updated on: Jan 29, 2025 | 7:55 AM

ಟಿ20 ಕ್ರಿಕೆಟ್ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ (Tilak Varma) ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅದು ಕೂಡ ಸತತ 5 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.

ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 14 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್ಗಳೊಂದಿಗೆ 18 ರನ್ ಬಾರಿಸಿ ಔಟಾಗಿದ್ದರು. ಇದರೊಂದಿಗೆ ಅವರ ಅಜೇಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಅಂದರೆ ಕಳೆದ 4 ಇನಿಂಗ್ಸ್ಗಳಲ್ಲಿ ಅವರು ಅಜೇಯರಾಗಿ ಉಳಿದಿದ್ದರು. ಇದೀಗ ಐದನೇ ಇನಿಂಗ್ಸ್ನಲ್ಲಿ ತಿಲಕ್ ವರ್ಮಾ ಅವರನ್ನು ಔಟ್ ಮಾಡುವಲ್ಲಿ ಆದಿಲ್ ರಶೀದ್ ಯಶಸ್ವಿಯಾಗಿದ್ದಾರೆ.

ಹೀಗೆ ಔಟಾದ ಹೊರತಾಗಿಯೂ ತಿಲಕ್ ವರ್ಮಾ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಸತತ 5 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿ. ಹಾಗಿದ್ರೆ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಸತತ 5 ಇನಿಂಗ್ಸ್ಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...

ವಿನೋದ್ ಕಾಂಬ್ಳಿ: ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. 1993 ರಲ್ಲಿ 224, 227, 125, 4, 120 ರನ್ ಬಾರಿಸುವ ಮೂಲಕ ಕಾಂಬ್ಳಿ ಒಟ್ಟು 700 ರನ್ ಕಲೆಹಾಕಿದ್ದರು. ಈ ಮೂಲಕ ಟೆಸ್ಟ್ನಲ್ಲಿ ಸತತ 5 ಇನಿಂಗ್ಸ್ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

ವಿರಾಟ್ ಕೊಹ್ಲಿ: ಏಕದಿನ ಕ್ರಿಕೆಟ್ನಲ್ಲಿ ಸತತ 5 ಇನಿಂಗ್ಸ್ನಲ್ಲಿ ಅತ್ಯಧಿಕ ರನ್ ಪೇರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2012 ರಲ್ಲಿ ಕಿಂಗ್ ಕೊಹ್ಲಿ 133*, 108, 66, 183, 106 ರನ್ಗಳ ಇನಿಂಗ್ಸ್ ಆಡುವ ಮೂಲಕ ಒಟ್ಟು 596 ರನ್ ಕಲೆಹಾಕಿದ್ದರು. ಈ ಮೂಲಕ ಒನ್ಡೇ ಕ್ರಿಕೆಟ್ನಲ್ಲಿ ಸತತ 5 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ತಿಲಕ್ ವರ್ಮಾ: ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್ಗಳಲ್ಲಿ ಅತೀ ಹೆಚ್ಚು ರನ್ ಪೇರಿಸಿದ ದಾಖಲೆ ತಿಲಕ್ ವರ್ಮಾ ಪಾಲಾಗಿದೆ. ತಿಲಕ್ ವರ್ಮಾ 107*, 120*, 19*, 72*, 18 ರನ್ಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಚುಟುಕು ಸ್ವರೂಪದಲ್ಲಿ ಸತತ 5 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



