Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಸಾಧಕರ ಪಟ್ಟಿಗೆ ತಿಲಕ್ ವರ್ಮಾ ಎಂಟ್ರಿ

Tilak Varma Recods: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಜೇಯರಾಗಿ ಉಳಿದು ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದ್ದ ತಿಲಕ್ ವರ್ಮಾ ಇದೀಗ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್​ಗಳಿಸಿದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ವಿನೋದ್ ಕಾಂಬ್ಳಿ ಇರುವ ಎಲೈಟ್ ಲಿಸ್ಟ್​ಗೆ ಸೇರ್ಪಡೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 29, 2025 | 7:55 AM

ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ (Tilak Varma) ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅದು ಕೂಡ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.

1 / 6
ಇಂಗ್ಲೆಂಡ್​ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 14 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್​ಗಳೊಂದಿಗೆ 18 ರನ್ ಬಾರಿಸಿ ಔಟಾಗಿದ್ದರು. ಇದರೊಂದಿಗೆ ಅವರ ಅಜೇಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಅಂದರೆ ಕಳೆದ 4 ಇನಿಂಗ್ಸ್​ಗಳಲ್ಲಿ ಅವರು ಅಜೇಯರಾಗಿ ಉಳಿದಿದ್ದರು. ಇದೀಗ ಐದನೇ ಇನಿಂಗ್ಸ್​ನಲ್ಲಿ ತಿಲಕ್ ವರ್ಮಾ ಅವರನ್ನು ಔಟ್ ಮಾಡುವಲ್ಲಿ ಆದಿಲ್ ರಶೀದ್ ಯಶಸ್ವಿಯಾಗಿದ್ದಾರೆ.

2 / 6
ಹೀಗೆ ಔಟಾದ ಹೊರತಾಗಿಯೂ ತಿಲಕ್ ವರ್ಮಾ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿ. ಹಾಗಿದ್ರೆ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 6
ವಿನೋದ್ ಕಾಂಬ್ಳಿ: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. 1993 ರಲ್ಲಿ 224, 227, 125, 4, 120 ರನ್​ ಬಾರಿಸುವ ಮೂಲಕ ಕಾಂಬ್ಳಿ ಒಟ್ಟು 700 ರನ್ ಕಲೆಹಾಕಿದ್ದರು. ಈ ಮೂಲಕ ಟೆಸ್ಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

4 / 6
ವಿರಾಟ್ ಕೊಹ್ಲಿ: ಏಕದಿನ ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2012 ರಲ್ಲಿ ಕಿಂಗ್ ಕೊಹ್ಲಿ 133*, 108, 66, 183, 106 ರನ್​ಗಳ ಇನಿಂಗ್ಸ್​ ಆಡುವ ಮೂಲಕ ಒಟ್ಟು 596 ರನ್ ಕಲೆಹಾಕಿದ್ದರು. ಈ ಮೂಲಕ ಒನ್​ಡೇ ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ತಿಲಕ್ ವರ್ಮಾ: ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಪೇರಿಸಿದ ದಾಖಲೆ ತಿಲಕ್ ವರ್ಮಾ ಪಾಲಾಗಿದೆ. ತಿಲಕ್ ವರ್ಮಾ 107*, 120*, 19*, 72*, 18 ರನ್​ಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಚುಟುಕು ಸ್ವರೂಪದಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
Follow us