- TV9 Kannada Kannada News Photos Cricket Photos Tilak Varma Sets T20 Fielding World Record: Most Catches in a Calendar Year
ಬ್ಯಾಟಿಂಗ್ ಅಲ್ಲ, ಫೀಲ್ಡಿಂಗ್‌ನಲ್ಲಿ ವಿಶ್ವದಾಖಲೆ ಬರೆದ ತಿಲಕ್ ವರ್ಮಾ!
ಭಾರತದ ತಿಲಕ್ ವರ್ಮಾ ಶನಿವಾರ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಕೇವಲ ಮೂರು ಓವರ್‌ಗಳಲ್ಲಿ ಎರಡು ಪ್ರಮುಖ ಕ್ಯಾಚ್‌ಗಳನ್ನು ಹಿಡಿಯುವ ಮೂಲಕ, ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಫೀಲ್ಡರ್ ಎನಿಸಿಕೊಂಡಿದ್ದಾರೆ. 2026ರಲ್ಲಿ 26 ಕ್ಯಾಚ್‌ಗಳೊಂದಿಗೆ ಅವರು ಈ ದಾಖಲೆ ಬರೆದಿದ್ದು, ಟೀಂ ಇಂಡಿಯಾಕ್ಕೆ ಪ್ರಮುಖ ಆಟಗಾರರಾಗಿ ಹೊರಹೊಮ್ಮಿದ್ದಾರೆ.
Updated on: Oct 24, 2026 | 8:06 PM

ಶನಿವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ ಕೇವಲ ಮೂರು ಓವರ್‌ಗಳಲ್ಲೇ ವಿಶ್ವ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಆದರೆ ಈ ಸಾಧನೆ ಬ್ಯಾಟಿಂಗ್‌ನಲ್ಲಿ ಅಲ್ಲ, ಫೀಲ್ಡಿಂಗ್‌ನಲ್ಲಿ ಮೂಡಿಬಂದಿದೆ(PC-PTI).

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದ ವಿಶ್ವದಾಖಲೆ ಈಗ ತಿಲಕ್ ವರ್ಮಾ ಅವರ ಪಾಲಾಗಿದೆ. ಕಿವೀಸ್ ವಿರುದ್ಧದ ಎರಡನೇ ಟಿ20 ಪಂದ್ಯದ ಆರಂಭದ ಮೊದಲ ಮೂರು ಓವರ್‌ಗಳಲ್ಲೇ ಎರಡು ಪ್ರಮುಖ ಕ್ಯಾಚ್‌ಗಳನ್ನು ಹಿಡಿದರು(PC-PTI).

2026ರಲ್ಲಿ ಈವರೆಗೆ 32 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ತಿಲಕ್ ವರ್ಮಾ, ಫೀಲ್ಡರ್ ಆಗಿ ಒಟ್ಟು 26 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಈ ಮೂಲಕ ಇಂಡೋನೇಷ್ಯಾದ ಡ್ಯಾನಿಲ್ಸನ್ ಹಾವೋ ಅವರ ದಾಖಲೆಯನ್ನು ಮುರಿದಿದ್ದಾರೆ. ಹಾವೋ ಅವರು 2025ರಲ್ಲಿ 41 ಪಂದ್ಯಗಳಿಂದ 25 ಕ್ಯಾಚ್‌ಗಳನ್ನು ಪಡೆದಿದ್ದರು. ಆದರೆ ತಿಲಕ್ ಅವರಿಗಿಂತ ಕಡಿಮೆ ಪಂದ್ಯಗಳಲ್ಲೇ ಈ ದಾಖಲೆಯನ್ನು ಹಿಂದಿಕ್ಕಿರುವುದು ವಿಶೇಷ(PC-PTI).

ಗಾಯದ ಕಾರಣದಿಂದಾಗಿ ಈ ವರ್ಷದ ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಐದು ಪಂದ್ಯಗಳ ಟಿ20 ಸರಣಿಯಿಂದ ತಿಲಕ್ ವರ್ಮಾ ಹೊರಗುಳಿದಿದ್ದರು. ಆದರೆ 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಫೀಲ್ಡಿಂಗ್‌ನಲ್ಲೂ ಗಮನ ಸೆಳೆದಿದ್ದರು. ಅಮೆರಿಕ ವಿರುದ್ಧದ ಮೊದಲ ಪಂದ್ಯದಲ್ಲಿ ಎರಡು ಕ್ಯಾಚ್‌ಗಳನ್ನು ಹಿಡಿದಿದ್ದ ತಿಲಕ್, ನಮೀಬಿಯಾ, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ಇಂಗ್ಲೆಂಡ್ ವಿರುದ್ಧ ತಲಾ ಒಂದು ಕ್ಯಾಚ್ ಪಡೆದಿದ್ದರು(PC-PTI).

ಮಾರ್ಚ್ 8ರಂದು ಅಹಮದಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲೂ ತಿಲಕ್ ಎರಡು ಕ್ಯಾಚ್‌ಗಳನ್ನು ಹಿಡಿದಿದ್ದರು. ಸೆಪ್ಟೆಂಬರ್ 15ರಂದು ದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ತಿಲಕ್ ವರ್ಮಾ ಮೂರು ಕ್ಯಾಚ್‌ಗಳನ್ನು ಹಿಡಿದು ತಮ್ಮ ಫೀಲ್ಡಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು(PC-PTI).

ಇನ್ನು ನ್ಯೂಜಿಲೆಂಡ್ ವಿರುದ್ಧದ ಪ್ರಸಕ್ತ ಸರಣಿಯ ಮೊದಲ ಪಂದ್ಯದಲ್ಲೂ ಬೌಂಡರಿ ಬಳಿ ಫಿನ್ ಅಲೆನ್ ಅವರ ಕ್ಯಾಚ್ ಹಿಡಿದಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಮತ್ತೆರಡು ಕ್ಯಾಚ್‌ಗಳನ್ನು ಪಡೆದು ವಿಶ್ವದಾಖಲೆ ನಿರ್ಮಿಸಿರುವ ತಿಲಕ್ ವರ್ಮಾ, ಟೀಂ ಇಂಡಿಯಾದ ಪ್ರಮುಖ ಆಟಗಾರನಾಗಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ(PC-PTI).

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



