AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಪಂದ್ಯಗಳಿಗೆ ವಿದೇಶಿ ತಂಡ ಸೇರಿಕೊಂಡ ತಿಲಕ್ ವರ್ಮಾ

Tilak Varma: ಟೀಮ್ ಇಂಡಿಯಾದ ಭರವಸೆಯ ಯುವ ದಾಂಡಿಗರಲ್ಲಿ ತಿಲಕ್ ವರ್ಮಾ ಕೂಡ ಒಬ್ಬರು. ಭಾರತದ ಪರ ಈವರೆಗೆ 25 ಟಿ20 ಪಂದ್ಯಗಳನ್ನಾಡಿರುವ ತಿಲಕ್ ವರ್ಮಾ ಒಟ್ಟು 749 ರನ್ ಕಲೆಹಾಕಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಹಾಗೂ 3 ಅರ್ಧಶತಕಗಳು ಮೂಡಿಬಂದಿವೆ.

ಝಾಹಿರ್ ಯೂಸುಫ್
|

Updated on: Jun 19, 2025 | 10:35 AM

Share
ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಈ ಬಾರಿಯ ಸೀಸನ್​ನಲ್ಲಿ ಹ್ಯಾಂಪ್​ಶೈರ್ ತಂಡದ ಪರ ಕಣಕ್ಕಿಳಿಯಲು ಒಪ್ಪಂದ ಮಾಡಿಕೊಂಡಿದ್ದಾರೆ. ಈ ಒಪ್ಪಂದಂತೆ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​​ಶಿಪ್ ಡಿವಿಷನ್ ಒನ್ ಟೂರ್ನಿಯಲ್ಲಿ ತಿಲಕ್ ವರ್ಮಾ 4 ಪಂದ್ಯಗಳನ್ನಾಡಲಿದ್ದಾರೆ.

1 / 5
22 ವರ್ಷದ ತಿಲಕ್ ವರ್ಮಾ ಜೂನ್ 22 ರಂದು ಚೆಲ್ಮ್ಸ್‌ಫೋರ್ಡ್‌ನ ಕೌಂಟಿ ಮೈದಾನದಲ್ಲಿ ನಡೆಯಲಿರುವ ಎಸೆಕ್ಸ್ ವಿರುದ್ಧದ ಪಂದ್ಯದಲ್ಲಿ ಹ್ಯಾಂಪ್‌ಶೈರ್‌ ಪರ ಪಾದಾರ್ಪಣೆ ಮಾಡಲಿದ್ದು, ಇದಾದ ಬಳಿಕ ವೋರ್ಸೆಸ್ಟರ್‌ಶೈರ್, ನಾಟಿಂಗ್‌ಹ್ಯಾಮ್‌ಶೈರ್ ಮತ್ತು ವೋರ್ಸೆಸ್ಟರ್‌ಶೈರ್ ವಿರುದ್ಧದ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ.

2 / 5
ತಿಲಕ್ ವರ್ಮಾ ಭಾರತದ ಅಂಗಳದಲ್ಲಿ ಈವರೆಗೆ  18 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 28 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿರುವ ಅವರು 50.16 ಸರಾಸರಿಯಲ್ಲಿ 1,204 ರನ್ ಗಳಿಸಿದ್ದಾರೆ. ಇದರ ನಡುವೆ 5 ಶತಕಗಳು ಮತ್ತು 4 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಕೆಲ ಪಂದ್ಯಗಳಲ್ಲಿ ಸ್ಪಿನರ್​ ಆಗಿಯೂ ಕಾಣಿಸಿಕೊಂಡಿರುವ ಅವರು ಒಟ್ಟು ಎಂಟು ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3 / 5
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್) ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿರುವ ತಿಲಕ್ ವರ್ಮಾ ಎರಡು ಪಂದ್ಯಗಳಲ್ಲಿ ಮಾತ್ರ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ 13 ಇನಿಂಗ್ಸ್​ಗಳಲ್ಲಿ ಒಟ್ಟು 343 ರನ್ ಕಲೆಹಾಕಿದ್ದರು. ಅಂದರೆ ಕೇವಲ  31.18 ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದರು.

4 / 5
ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದರು. 2023 ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿರುವ ತಿಲಕ್ ವರ್ಮಾ ಇಲ್ಲಿಯವರೆಗೆ 25 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 155.07 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 749 ರನ್ ಕಲೆಹಾಕಿದ್ದಾರೆ. ಇದೀಗ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿರುವ ತಿಲಕ್ ವರ್ಮಾ, ಇಂಗ್ಲೆಂಡ್​ನಲ್ಲಿ ರೆಡ್ ಬಾಲ್ ಪಂದ್ಯಗಳನ್ನಾಡಲು ನಿರ್ಧರಿಸಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ