ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಸ್ಫೋಟಕ ದಾಂಡಿಗ ಎಂಟ್ರಿ

Updated on: Jan 26, 2026 | 8:53 AM

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡವು ಬಲಿಷ್ಠ ಪಡೆಯನ್ನು ರೂಪಿಸಿದೆ.

1 / 5
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ತಿಲಕ್ ವರ್ಮಾ ಸಂಪೂರ್ಣ ಫಿಟ್​​ ಸಾಧಿಸಿದ್ದಾರೆ. ಈ ಫಿಟ್​ನೆಸ್​ನೊಂದಿಗೆ ಅವರು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ತಿಲಕ್ ವರ್ಮಾ ಸಂಪೂರ್ಣ ಫಿಟ್​​ ಸಾಧಿಸಿದ್ದಾರೆ. ಈ ಫಿಟ್​ನೆಸ್​ನೊಂದಿಗೆ ಅವರು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

2 / 5

ಟಿ20 ವಿಶ್ವಕಪ್ ಟೂರ್ನಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಎಡಗೈ  ದಾಂಡಿಗ ತಿಲಕ್ ವರ್ಮಾ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ನೋವಿನ ಸಮಸ್ಯೆಗೆ ಒಳಗಾಗಿದ್ದ ಕಾರಣ ಅವರು ಸರ್ಜರಿ ಮಾಡಿಸಿಕೊಂಡಿದ್ದರು.

3 / 5

ಇದೀಗ ನೋವಿನ ಸಮಸ್ಯೆಯಿಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಾಗಿ ಫೆಬ್ರವರಿ 3 ರಂದು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಬಹುತೇಕ ಖಚಿತ.

4 / 5

ಇದರೊಂದಿಗೆ ತಿಲಕ್ ವರ್ಮಾ ಸ್ಥಾನದಲ್ಲಿ ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದಿಲ್ಲ ಎಂಬುದು ಸಹ ಕನ್ಫರ್ಮ್ ಆಗಿದೆ. ಏಕೆಂದರೆ ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯಕ್ಕೂ ಮುನ್ನ ತಿಲಕ್ ವರ್ಮಾ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಭಾರತ ತಂಡದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

5 / 5

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್.

Loading...
Unable to load recommendations.
Follow Us