IPL 2025: ಟಿಮ್ ಬದಲಿಗೆ ಟಿಮ್?
IPL 2025 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ಇಂದು (ಮೇ 27) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಆರ್ಸಿಬಿ ಮೊದಲ ಕ್ವಾಲಿಫೈಯರ್ಗೆ ಅರ್ಹತೆ ಪಡೆಯಲಿದೆ.
Updated on: May 27, 2025 | 9:03 AM

ಈ ನಿರ್ಣಾಯಕ ಪಂದ್ಯಕ್ಕೆ ಆರ್ಸಿಬಿ ತಂಡದ ಹೊಡಿಬಡಿ ದಾಂಡಿಗ ಟಿಮ್ ಡೇವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಸೋಮವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಸಹ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಭಾನುವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

ಇನ್ನು ಟಿಮ್ ಡೇವಿಡ್ ಹೊರಗುಳಿದರೆ, ಆರ್ಸಿಬಿ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಲಿಯಾಮ್ ಲಿವಿಂಗ್ಸ್ಟೋನ್ ಈಗಾಗಲೇ 7 ಪಂದ್ಯಗಳನ್ನಾಡಿದ್ದು, ಈ ವೇಳೆ ಕಲೆಹಾಕಿರುವುದು ಕೇವಲ 87 ರನ್ಗಳು ಮಾತ್ರ. ಹೀಗಾಗಿ ಮತ್ತೆ ಅವರನ್ನೇ ಕಣಕ್ಕಿಳಿಸಲಿದ್ದಾರಾ ಎಂಬುದೇ ಪ್ರಶ್ನೆ.

ಇತ್ತ ಜೇಕಬ್ ಬೆಥೆಲ್ ಸ್ಥಾನಕ್ಕೆ ಬದಲಿಯಾಗಿ ಆಗಮಿಸಿರುವ ನ್ಯೂಝಿಲೆಂಡ್ನ ಟಿಮ್ ಸೈಫರ್ಟ್ ಕೂಡ ಹೊಡಿಬಡಿ ದಾಂಡಿಗ. ಪ್ರಸ್ತುತ ಅವರು ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದರೂ, ಈ ಹಿಂದೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಆರ್ಸಿಬಿ ತಂಡವು ಟಿಮ್ ಡೇವಿಡ್ ಬದಲಿಗೆ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

ಇತ್ತ ಟಿಮ್ ಡೇವಿಡ್ ಅವರು ಫೈನಲ್ ಪಂದ್ಯವಾಡುವ ಬಗ್ಗೆ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಕೂಡ ಖಚಿತ ಮಾಹಿತಿ ನೀಡಿಲ್ಲ. ಡೇವಿಡ್ ಅವರ ಫಿಟ್ನೆಸ್ ಮೇಲೆ ವೈದ್ಯರು ನಿಗಾವಹಿಸಿದ್ದು, ಮಂಗಳವಾರ ಸಂಜೆಯೊಳಗೆ ಅವರು ಆಡುವ ಪರಿಸ್ಥಿತಿಯಲ್ಲಿದ್ದರೆ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಸೋಮವಾರ ಕೂಡ ಅಭ್ಯಾಸದಿಂದ ಹೊರಗುಳಿದಿರುವ ಕಾರಣ ಟಿಮ್ ಡೇವಿಡ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಆರ್ಸಿಬಿ ಪರ ಆಲ್ರೌಂಡರ್ ಆಗಿ ಲಿಯಾಮ್ ಲಿವಿಂಗ್ಸ್ಟೋನ್ ಕಣಕ್ಕಿಳಿಯಲಿದ್ದಾರೆ ಎನ್ನಬಹುದು. ಏಕೆಂದರೆ ಕಳೆದ ಮ್ಯಾಚ್ನಲ್ಲಿ ಟಿಮ್ ಡೇವಿಡ್ ಬದಲಿಗೆ ಲಿವಿಂಗ್ಸ್ಟೋನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ ಫೈನಲ್ ಪಂದ್ಯಕ್ಕೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...
