ಬಿಗ್​ ಬ್ಯಾಷ್​ ಲೀಗ್​ನಿಂದ ಹೊರಬಿದ್ದ RCB ಆಟಗಾರ

Updated on: Dec 30, 2025 | 7:34 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಕೂಡ ಒಬ್ಬರು. ಇದೀಗ ಟಿಮ್ ಡೇವಿಡ್ ಗಾಯಗೊಂಡಿರುವುದು ಆರ್​ಸಿಬಿ ತಂಡದ ಚಿಂತೆಗೆ ಕಾರಣವಾಗಿದೆ.

1 / 5
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನಿಂದ ಸ್ಟಾರ್ ಆಟಗಾರ ಟಿಮ್ ಡೇವಿಡ್ (Tim David) ಹೊರಬಿದ್ದಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು.

2 / 5
ಇದೀಗ ಈ ಗಾಯದ ಕಾರಣ ಅವರು ಬಿಗ್ ಬ್ಯಾಷ್ ಲೀಗ್ ಅನ್ನು ಅರ್ಧದಲ್ಲೇ ತೊರೆದಿದ್ದಾರೆ. ಗಾಯವು ಗಂಭೀರವಾಗಿರುವ ಕಾರಣ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೂ ಟಿಮ್ ಡೇವಿಡ್ ಅನುಮಾನ ಎನ್ನಲಾಗಿದೆ.

3 / 5
ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ ಆಯ್ಕೆಯಾಗುವುದು ಖಚಿತವಾಗಿತ್ತು. ಆದರೀಗ ಅವರು ಗಂಭೀರ ಗಾಯಕ್ಕೆ ಒಳಗಾಗಿರುವುದು ಕ್ರಿಕೆಟ್ ಆಸ್ಟ್ರೇಲಿಯಾದ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಬಗ್ಗೆ ಕೂಡ ಚಿಂತಿಸಲಾಗಿದೆ.

4 / 5
ಅಂದರೆ ಟಿ20 ವಿಶ್ವಕಪ್​​ಗೆ ಇನ್ನೂ ಒಂದು ತಿಂಗಳು ಇರುವ ಕಾರಣ ಟಿಮ್ ಡೇವಿಡ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸದಿದ್ದರೆ ಟೀಮ್​ನಿಂದ ಕೈ ಬಿಡಲು ಕ್ರಿಕೆಟ್ ಆಸ್ಟ್ರೇಲಿಯಾದ ಆಯ್ಕೆ ಸಮಿತಿ ಚರ್ಚಿಸಿದೆ ಎಂದು ವರದಿಯಾಗಿದೆ.

5 / 5
ಒಂದು ವೇಳೆ ಟಿಮ್ ಡೇವಿಡ್ ಟಿ20 ವಿಶ್ವಕಪ್​ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಪ್ರಮುಖ ಟೂರ್ನಿಯಿಂದ ಹೊರಗುಳಿದ ಆಟಗಾರರು ಸಂಪೂರ್ಣ ಫಿಟ್​ನೆಸ್ ಸಾಧಿಸುವರೆಗೆ ಕ್ರಿಕೆಟ್ ಆಸ್ಟ್ರೇಲಿಯಾ ಎನ್​ಒಸಿ ನೀಡುವುದಿಲ್ಲ. ಹೀಗಾಗಿ ಟಿ20 ವಿಶ್ವಕಪ್​ಗೆ ಅಲಭ್ಯರಾದರೆ, ಟಿಮ್ ಡೇವಿಡ್ ಆರ್​ಸಿಬಿ ತಂಡದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.

Published On - 7:33 am, Tue, 30 December 25