AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Record: ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ಬರೆದ ಟಿಮ್ ಸೌಥಿ

India vs New Zealand: ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 202 ವಿಕೆಟ್ ಕಬಳಿಸಿರುವ ಟಿಮ್ ಸೌಥಿ ಮೂರು ಮಾದರಿಯಲ್ಲಿ ಮೂರಂಕಿ ವಿಕೆಟ್ ಪಡೆದ ಮೊದಲ ಬೌಲರ್​ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Nov 26, 2022 | 7:32 PM

Share
ನ್ಯೂಜಿಲೆಂಡ್ ತಂಡದ ವೇಗಿ ಟಿಮ್ ಸೌಥಿ ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂರು ವಿಕೆಟ್​ಗಳೊಂದಿಗೆ ಕ್ರಿಕೆಟ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ಕಿವೀಸ್ ವೇಗಿ ತಮ್ಮದಾಗಿಸಿಕೊಂಡಿದ್ದಾರೆ.

1 / 7
ಭಾರತದ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿ ಟಿಮ್ ಸೌಥಿ ಏಕದಿನ ಕ್ರಿಕೆಟ್​ನಲ್ಲಿ 200 ವಿಕೆಟ್​ಗಳನ್ನು ಪೂರೈಸಿದ್ದರು. ಇದರೊಂದಿಗೆ ಮೂರು ಮಾದರಿಯಲ್ಲೂ ಮೂರಂಕಿ ವಿಕೆಟ್​ ಪಡೆದ ವಿಶ್ವದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

2 / 7
ಅಂದರೆ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್​ನಲ್ಲಿ ಟಿಮ್ ಸೌಥಿ 347 ವಿಕೆಟ್ ಕಬಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದರು.

3 / 7
ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 134 ವಿಕೆಟ್ ಉರುಳಿಸುವ ಮೂಲಕ ಮಿಂಚಿದ್ದರು. ಈ ಮೂಲಕ ಚುಟುಕು ಮಾದರಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

4 / 7
ಇದೀಗ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 202 ವಿಕೆಟ್ ಕಬಳಿಸಿರುವ ಟಿಮ್ ಸೌಥಿ ಮೂರು ಮಾದರಿಯಲ್ಲಿ ಮೂರಂಕಿ ವಿಕೆಟ್ ಪಡೆದ ಮೊದಲ ಬೌಲರ್​ ಎನಿಸಿಕೊಂಡಿದ್ದಾರೆ.

5 / 7
ಈ ಮೂಲಕ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ಅಧ್ಯಾಯವನ್ನು ಟಿಮ್ ಸೌಥಿ ಬರೆದಿರುವುದು ವಿಶೇಷ.

6 / 7
ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್, ಕೆಕೆಆರ್, ಸಿಎಸ್​ಕೆ ಪರ ಒಟ್ಟು 52 ಪಂದ್ಯಗಳನ್ನಾಡಿರುವ ಟಿಮ್ ಸೌಥಿ 45 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್ ಸೀಸನ್​ 16 ಗಾಗಿ ಕೆಕೆಆರ್​ ತಂಡವು ಸೌಥಿಯನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಮುಂಬರುವ ಸೀಸನ್​ನಲ್ಲಿ ನ್ಯೂಜಿಲೆಂಡ್ ವೇಗಿ ಕೊಲ್ಕತ್ತಾ ಪರ ಕಣಕ್ಕಿಳಿಯಲಿದ್ದಾರೆ.

7 / 7

Published On - 7:31 pm, Sat, 26 November 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ