- Kannada News Photo gallery Cricket photos Tim Southee now has hit a six against each of the nine teams in Test cricket
Tim Southee: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟಿಮ್ ಸೌಥಿ
Tim Southee Records: ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಸೌಥಿ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 1 ಫೋರ್ನೊಂದಿಗೆ 34 ರನ್ ಬಾರಿಸಿದ್ದರು. ಈ ವೇಳೆ ಸಿಡಿಸಿದ ಸಿಕ್ಸ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 9 ತಂಡಗಳ ವಿರುದ್ಧ ಸಿಕ್ಸರ್ಗಳನ್ನು ಬಾರಿಸಿದ ಅಪರೂಪದ ದಾಖಲೆಯನ್ನು ತಮ್ಮದಾಗಿಸಿಕೊಂಡರು.
Updated on: Dec 02, 2023 | 6:28 PM

ಸಿಲ್ಹೆಟ್ನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ 2 ಸಿಕ್ಸ್ ಸಿಡಿಸುವ ಮೂಲಕ ನ್ಯೂಝಿಲೆಂಡ್ ಆಟಗಾರ ಟಿಮ್ ಸೌಥಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ವಿಶ್ವ ದಾಖಲೆ ಎಂಬುದು ವಿಶೇಷ.

ಆತಿಥೇಯ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಸೌಥಿ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 1 ಫೋರ್ನೊಂದಿಗೆ 34 ರನ್ ಬಾರಿಸಿದ್ದರು. ಈ ವೇಳೆ ಸಿಡಿಸಿದ ಸಿಕ್ಸ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 9 ತಂಡಗಳ ವಿರುದ್ಧ ಸಿಕ್ಸರ್ಗಳನ್ನು ಬಾರಿಸಿದ ಅಪರೂಪದ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಅಂದರೆ ಟಿಮ್ ಸೌಥಿ ಎದುರಿಸಿದ 9 ಟೆಸ್ಟ್ ತಂಡಗಳ ವಿರುದ್ಧ ಕೂಡ ಸಿಕ್ಸ್ಗಳನ್ನು ಬಾರಿಸಿದ್ದಾರೆ. ಇದರಲ್ಲಿ ಇಂಗ್ಲೆಂಡ್ ವಿರುದ್ಧ 25 ಸಿಕ್ಸ್ಗಳನ್ನು ಬಾರಿಸಿದ್ದರೆ, ಭಾರತದ ವಿರುದ್ಧ 15 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಸೌಥಿ ಬ್ಯಾಟ್ನಿಂದ 12 ಸಿಕ್ಸ್ಗಳು ಮೂಡಿಬಂದಿವೆ.

ಹಾಗೆಯೇ ಪಾಕಿಸ್ತ್ತಾನ್ ವಿರುದ್ಧ 10 ಸಿಕ್ಸ್, ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ವಿರುದ್ಧ ತಲಾ 9 ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಇನ್ನು ಬಾಂಗ್ಲಾದೇಶ್ ವಿರುದ್ಧ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 2 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಇದಲ್ಲದೆ ಝಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟಿಮ್ ಸೌಥಿ 1 ಸಿಕ್ಸ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ 9 ತಂಡಗಳ ವಿರುದ್ಧ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆಯನ್ನು ಟಿಮ್ ಸೌಥಿ ತಮ್ಮದಾಗಿಸಿಕೊಂಡಿರುವುದು ವಿಶೇಷ.



















