ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟಿಮ್ ಸೌಥಿ

| Updated By: ಝಾಹಿರ್ ಯೂಸುಫ್

Updated on: Aug 31, 2023 | 5:41 PM

Tim Southee Record: ಈ ದಾಖಲೆ ಬಾಂಗ್ಲಾದೇಶ್ ತಂಡದ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಹೆಸರಿನಲ್ಲಿತ್ತು. ಶಕೀಬ್ ಒಟ್ಟು 140 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸೌಥಿ ಅಗ್ರಸ್ಥಾನಕ್ಕೇರಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

1 / 7
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ 1 ವಿಕೆಟ್ ಕಬಳಿಸಿದ್ದರು. ಈ ಒಂದು ವಿಕೆಟ್​ನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಟಿಮ್ ಸೌಥಿ ತಮ್ಮದಾಗಿಸಿಕೊಂಡಿದ್ದಾರೆ.

2 / 7
ಇದಕ್ಕೂ ಮುನ್ನ ಈ ದಾಖಲೆ ಬಾಂಗ್ಲಾದೇಶ್ ತಂಡದ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಹೆಸರಿನಲ್ಲಿತ್ತು. ಶಕೀಬ್ ಒಟ್ಟು 140 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸೌಥಿ ಅಗ್ರಸ್ಥಾನಕ್ಕೇರಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

3 / 7
1- ಟಿಮ್ ಸೌಥಿ: ನ್ಯೂಝಿಲೆಂಡ್ ಪರ 109 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಟಿಮ್ ಸೌಥಿ ಒಟ್ಟು 141 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 7
2- ಶಕೀಬ್ ಅಲ್ ಹಸನ್: ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 115 ಟಿ20 ಇನಿಂಗ್ಸ್​ಗಳಿಂದ ಒಟ್ಟು 140 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 7
3- ರಶೀದ್ ಖಾನ್: ಅಫ್ಘಾನಿಸ್ತಾನ್ ತಂಡದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೇವಲ 82 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 130 ವಿಕೆಟ್ ಕಬಳಿಸಿದ್ದಾರೆ.

6 / 7
4- ಇಶ್ ಸೋಧಿ: ನ್ಯೂಝಿಲೆಂಡ್ ಸ್ಪಿನ್ನರ್ ಇಶ್ ಸೋಧಿ 96 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 119 ವಿಕೆಟ್​ಗಳನ್ನು ಪಡೆದಿದ್ದಾರೆ.

7 / 7
5- ಲಸಿತ್ ಮಾಲಿಂಗ: ಶ್ರೀಲಂಕಾ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ 84 ಟಿ20 ಇನಿಂಗ್ಸ್​ಗಳಿಂದ ಒಟ್ಟು 107 ವಿಕೆಟ್​ ಕಬಳಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.