ನೆಪಯರ್ನ ಮಕ್ಲೆನ್ ಪಾರ್ಕ್ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.
ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.
ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಸಂಜು ಸ್ಯಾಮ್ಸನ್ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್ಗೆ ಮತ್ತೊಂದು ಅವಕಾಶ ನೀಡಲಾಗಿದೆ.
ಟಿ20 ಕ್ರಿಕೆಟ್ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.
ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.
ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.
ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.
ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.
ಅರ್ಶ್ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.
ಯುಜ್ವೇಂದ್ರ ಚಹಲ್ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್ನಲ್ಲಿದ್ದಾರೆ.
Published On - 12:04 pm, Tue, 22 November 22