Updated on: Jun 14, 2023 | 6:23 PM
TNPL 2023: ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಫೈನಲ್ ಪಂದ್ಯದಲ್ಲಿ CSK ವಿರುದ್ಧ 47 ಎಸೆತಗಳಲ್ಲಿ 96 ರನ್ ಬಾರಿಸಿ ಅಬ್ಬರಿಸಿದ್ದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ತಮಿಳುನಾಡು ಪ್ರೀಮಿಯರ್ ಲೀಗ್ನಲ್ಲೂ ತಮ್ಮ ಭರ್ಜರಿ ಫಾರ್ಮ್ ಮುಂದುವರೆಸಿದ್ದಾರೆ.
ಜೂನ್ 12 ರಿಂದ ಪ್ರಾರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL 2023) ಮೊದಲ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಪ್ಪೂರ್ ತಂಡ ಬೌಲಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲು ಬ್ಯಾಟ್ ಮಾಡಿದ ಲೈಕಾ ಕೋವೈ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಿಬ್ಬರೂ 14 ರನ್ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಅಕ್ಷರಶಃ ಅಬ್ಬರಿಸಿದರು.
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಸುದರ್ಶನ್ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್ನೊಂದಿಗೆ ಕೇವಲ 45 ಎಸೆತಗಳಲ್ಲಿ 86 ರನ್ ಚಚ್ಚಿದರು. ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿತು.
ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿತು.
180 ರನ್ಗಳ ಕಠಿಣ ಗುರಿ ಬೆನ್ನತ್ತಿದ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡದ ಪರ ತುಷಾರ್ ರಹೇಜಾ 33 ರನ್ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.
ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗುವ ಮೂಲಕ ತಿರುಪ್ಪೂರ್ ತಂಡವು 109 ರನ್ಗಳಿಗೆ ಆಲೌಟ್ ಆದರು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ ತಂಡವು 70 ರನ್ಗಳ ಭರ್ಜರಿ ಜಯ ಸಾಧಿಸಿತು.
ಇನ್ನು ಲೈಕಾ ಪರ ನಾಯಕ ಶಾರೂಖ್ ಖಾನ್ 3 ವಿಕೆಟ್ ಪಡೆದರೆ, ಎಂ ಮೊಹಮ್ಮದ್ 2 ವಿಕೆಟ್ ಕಬಳಿಸಿದರು. ಹಾಗೆಯೇ ಗೌತಮ್, ಕಿರಣ್, ಮುಖೇಶ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.