TNPL 2023: ಹ್ಯಾಟ್ರಿಕ್ ಹಾಫ್ ಸೆಂಚುರಿ: ಮುಂದುವರೆದ ಸಾಯಿ ಸುದರ್ಶನ್ ಸಿಡಿಲಬ್ಬರ..!

TNPL 2023: ಸಾಯಿ ಸುದರ್ಶನ್ ಈ ಬಾರಿಯ ಟಿಎನ್​ಪಿಎಲ್​ನ ಮೊದಲ ಪಂದ್ಯದಲ್ಲಿ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ವಿರುದ್ಧ ಕೇವಲ 45 ಎಸೆತಗಳಲ್ಲಿ 86 ರನ್ ಬಾರಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 20, 2023 | 7:24 PM

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಅವರ ಅಬ್ಬರ ಮುಂದುವರೆದಿದೆ. ಟಿಎನ್​ಪಿಎಲ್​ನ 9ನೇ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಹಾಗೂ ಚೆಪಾಕ್ ಸೂಪರ್ ಗಿಲ್ಲಿಸ್ ಮುಖಾಮುಖಿಯಾಗಿತ್ತು.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋವೈ ತಂಡದ ನಾಯಕ ಶಾರೂಖ್ ಖಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆಪಾಕ್ ಸೂಪರ್ ಗಿಲ್ಲಿಸ್ ತಂಡದ ಬ್ಯಾಟರ್​ಗಳು ಲೈಕಾ ಕೋವೈ ಕಿಂಗ್ಸ್ ಬೌಲರ್​ಗಳ ಮುಂದೆ ರನ್​ಗಳಿಸಲು ಪರದಾಡಿದರು. ಅಲ್ಲದೆ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 126 ರನ್​ಗಳಿಂದ ಇನಿಂಗ್ಸ್ ಅಂತ್ಯಗೊಳಿಸಿತು.

2 / 7
127 ರನ್​ಗಳ ಸುಲಭ ಗುರಿ ಬೆನ್ನತ್ತಿದ ಲೈಕಾ ಕೋವೈ ಕಿಂಗ್ಸ್ ತಂಡಕ್ಕೆ ಆರಂಭಿಕರಾದ ಸಚಿನ್ (14) ಹಾಗೂ ಸುರೇಶ್ ಕುಮಾರ್ (47) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಕ್ರೀಸ್​ಗಿಳಿದ ಸಾಯಿ ಸುದರ್ಶನ್ ಮತ್ತೊಮ್ಮೆ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

3 / 7
ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಾಯಿ ಸುದರ್ಶನ್ 43 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 9 ಫೋರ್​ನೊಂದಿಗೆ ಅಜೇಯ 64 ರನ್ ಬಾರಿಸಿದರು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ ತಂಡವು 16.3 ಓವರ್​ಗಳಲ್ಲಿ 128 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

4 / 7
ವಿಶೇಷ ಎಂದರೆ ಇದು ಸಾಯಿ ಸುದರ್ಶನ್ ಅವರ ಸತತ 3ನೇ ಅರ್ಧಶತಕವಾಗಿದೆ. ಐಪಿಎಲ್​ ಫೈನಲ್​ನಲ್ಲಿ ಸಿಎಸ್​ಕೆ ವಿರುದ್ಧ 96 ರನ್​ ಸಿಡಿಸಿ ಅಬ್ಬರಿಸಿದ್ದ ಸಾಯಿ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲೂ ತಮ್ಮ ಫಾರ್ಮ್ ಮುಂದುವರೆಸಿದ್ದಾರೆ.

5 / 7
ಈ ಬಾರಿಯ ಟಿಎನ್​ಪಿಎಲ್​ನ ಮೊದಲ ಪಂದ್ಯದಲ್ಲಿ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ವಿರುದ್ಧ ಸಾಯಿ ಸುದರ್ಶನ್ ಕೇವಲ 45 ಎಸೆತಗಳಲ್ಲಿ 86 ರನ್ ಬಾರಿಸಿದ್ದರು. ಇನ್ನು ನೆಲ್ಲೈ ರಾಯಲ್ ಕಿಂಗ್ಸ್ ವಿರುದ್ಧದ 2ನೇ ಪಂದ್ಯದಲ್ಲಿ 52 ಎಸೆತಗಳಲ್ಲಿ 90 ರನ್ ಚಚ್ಚಿದ್ದರು.

6 / 7
ಇದೀಗ ಚೆಪಾಕ್ ಸೂಪರ್ ಗಿಲ್ಲಿಸ್ 43 ಎಸೆತಗಳಲ್ಲಿ ಅಜೇಯ 64 ರನ್ ಬಾರಿಸುವ ಮೂಲಕ ಸಾಯಿ ಸುದರ್ಶನ್ ಹ್ಯಾಟ್ರಿಕ್ ಅರ್ಧಶತಕದ ಸಾಧನೆ ಮಾಡಿದ್ದಾರೆ. ಈ ಮೂಲಕ 21ರ ಯುವ ಎಡಗೈ ದಾಂಡಿಗ ತಮ್ಮ ಭರ್ಜರಿ ಫಾರ್ಮ್ ಮುಂದುವರೆಸಿದ್ದಾರೆ.

7 / 7
Follow us
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ

ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು

ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ

ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು