AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2024: 9 ಭರ್ಜರಿ ಸಿಕ್ಸ್​ಗಳೊಂದಿಗೆ ದಾಖಲೆಯ ಶತಕ ಸಿಡಿಸಿದ ಸಾಯಿ ಸುದರ್ಶನ್

Sai Sudharsan: ಐಪಿಎಲ್​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್​ ತಂಡದಲ್ಲಿದ್ದಾರೆ. ಆದರೆ ಈ ಬಾರಿ ಮೆಗಾ ಹರಾಜು ನಡೆಯುತ್ತಿರುವುದರಿಂದ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಗುಜರಾತ್ ಟೈಟಾನ್ಸ್​ ಸಾಯಿ ಸುದರ್ಶನ್​ಗೆ ನೀಡುತ್ತಿರುವುದು ಕೇವಲ 20 ಲಕ್ಷ ರೂ. ಮಾತ್ರ. ಹೀಗಾಗಿ ಅವರು ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಝಾಹಿರ್ ಯೂಸುಫ್
|

Updated on:Jul 31, 2024 | 10:53 AM

Share
ತಮಿಳುನಾಡು ಪ್ರೀಮಿಯರ್ ಲೀಗ್​ನ (TNPL 2024) ಕ್ವಾಲಿಫೈಯರ್ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸುವ ಮೂಲಕ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ದಿಂಡಿಗುಲ್​ನ ಎನ್​ಪಿಆರ್​ ಕಾಲೇಜ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ತಿರುಪ್ಪೂರ್ ತಮಿಳನ್ಸ್​ ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಪ್ಪೂರ್ ತಮಿಳನ್ಸ್​ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಅಮಿತ್ ಸಾತ್ವಿಕ್ 42 ಎಸೆತಗಳಲ್ಲಿ 67 ರನ್ ಬಾರಿಸಿದರೆ, ತುಷಾರ್ ರಹೇಜಾ 31 ಎಸೆತಗಳಲ್ಲಿ 55 ರನ್ ಸಿಡಿಸಿದರು. ಇನ್ನು ಮೊಹಮ್ಮದ್ ಅಲಿ 23 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 45 ರನ್​ ಚಚ್ಚಿದ್ದರು. ಈ ಮೂಲಕ ತಿರುಪ್ಪೂರ್ ತಮಿಳನ್ಸ್​ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.

2 / 6
201 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಕೋವೈ ಕಿಂಗ್ಸ್ ತಂಡವು ಮೊದಲ ಎಸೆತದಲ್ಲೇ ವಿಘ್ನೇಶ್ (0) ವಿಕೆಟ್ ಕಳೆದುಕೊಂಡಿತು. ಇದರ ಬೆನ್ನಲ್ಲೇ ಮತ್ತೋರ್ವ ಆರಂಭಿಕ ಸುಜಯ್ (19) ಕೂಡ ಔಟಾದರು. ಆ ಬಳಿಕ ಬಂದ ಜಯರಾಮನ್ ಕೇವಲ 5 ರನ್​ಗಳಿಸಿ ನಿರ್ಗಮಿಸಿದರು. ಇದಾಗ್ಯೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಒಂದೆಡೆ ಗಟ್ಟಿಯಾಗಿ ನೆಲೆ ನಿಂತಿದ್ದರು.

3 / 6
4ನೇ ವಿಕೆಟ್​ಗೆ ಮುಕಿಲೇಶ್ ಜೊತೆಗೂಡಿದ ಸಾಯಿ ಸುದರ್ಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಲಾರಂಭಿಸಿದರು. ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ತಿರುಪ್ಪೂರ್ ತಮಿಳನ್ಸ್​ ಬೌಲರ್​ಗಳು ಲಯ ತಪ್ಪಿದರು. ಇದರ ಸಂಪೂರ್ಣ ಲಾಭ ಪಡೆದ ಸಾಯಿ ಸಿಕ್ಸ್​-ಫೋರ್​ಗಳ ಸುರಿಮಳೆಗೈಯ್ಯಲಾರಂಭಿಸಿದರು.

4 / 6
ಅಲ್ಲದೆ ಟಿ ನಟರಾಜನ್ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಸಾಯಿ ಸುದರ್ಶನ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು. ಸೆಂಚುರಿ ಬಳಿಕವೂ ಅಬ್ಬರ ಮುಂದುವರೆಸಿದ ಸಾಯಿ 56 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 123 ರನ್​ ಬಾರಿಸಿದರು. ಪರಿಣಾಮ ಲೈಕಾ ಕೋವೈ ಕಿಂಗ್ಸ್​ ತಂಡವು 18.5 ಓವರ್​ಗಳಲ್ಲಿ ಗುರಿ ತಲುಪಿ ಭರ್ಜರಿ ಜಯ ಸಾಧಿಸಿತು.

5 / 6
ಈ 123 ರನ್​ಗಳೊಂದಿಗೆ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ವೈಯುಕ್ತಿಕ ಗರಿಷ್ಠ ಸ್ಕೋರ್​ಗಳಿಸಿದ ಬ್ಯಾಟರ್ ಎಂಬ ದಾಖಲೆ ಸಾಯಿ ಸುದರ್ಶನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮುರಳಿ ವಿಜಯ್ ಹೆಸರಿನಲ್ಲಿತ್ತು. 2022ರ ಸೀಸನ್​ನಲ್ಲಿ ಮುರಳಿ ವಿಜಯ್ 66 ಎಸೆತಗಳಲ್ಲಿ 121 ರನ್​ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಸ್ಪೋಟಕ ಸೆಂಚುರಿಯೊಂದಿಗೆ ಸಾಯಿ ಸುದರ್ಶನ್ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 6

Published On - 10:53 am, Wed, 31 July 24

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?