BBL 2023: ಬಿಗ್ ಬ್ಯಾಷ್ ಲೀಗ್ನಲ್ಲಿ RCB ಆಟಗಾರನಿಗೆ 4 ಪಂದ್ಯಗಳ ನಿಷೇಧ..!
Tom Curran: ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿ 64 ರನ್ ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ.
Updated on: Dec 21, 2023 | 3:26 PM

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ ಸೀಸನ್ 14 ರ ನಾಲ್ಕು ಪಂದ್ಯಗಳಿಂದ ಟಾಮ್ ಕರನ್ ನಿಷೇಧಕ್ಕೊಳಗಾಗಿದ್ದಾರೆ. ಸಿಡ್ನಿ ಸಿಕ್ಸರ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಕರನ್ ಅಂಪೈರ್ ವಿರುದ್ಧ ಅನುಚಿತವಾಗಿ ವರ್ತಿಸಿದ ಹಿನ್ನಲೆ ಈ ಕ್ರಮ ಕೈಗೊಳ್ಳಲಾಗಿದೆ.

ಲಾನ್ಸೆಸ್ಟನ್‌ನ ನಾರ್ತ್ ಟ್ಯಾಸ್ಮೆನಿಯಾ ಕ್ರಿಕೆಟ್ ಅಸೋಸಿಯೇಷನ್ ಗ್ರೌಂಡ್‌ನಲ್ಲಿ ನಡೆದ ಹೋಬರ್ಟ್ ಹರಿಕೇನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಟಾಮ್ ಕರನ್ ಪಿಚ್ನಲ್ಲಿ ಓಡಿದ್ದರಿಂದ ಅಂಪೈರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ಪರಿಗಣಿಸದೇ ಇಂಗ್ಲೆಂಡ್ ಆಟಗಾರ ಬೌಲಿಂಗ್ ರನ್ನಪ್ ವೇಳೆ ಅಂಪೈರ್ಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದರು.

ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕರನ್ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಹಿನ್ನಲೆಯಲ್ಲಿ ಮ್ಯಾಚ್ ರೆಫರಿ ಸಿಡ್ನಿ ಸಿಕ್ಸರ್ಸ್ ಆಟಗಾರನ ಮೇಲೆ 4 ಪಂದ್ಯಗಳ ನಿಷೇಧ ಹೇರಿದ್ದಾರೆ.

ವಿಶೇಷ ಎಂದರೆ ಎರಡು ದಿನಗಳ ಹಿಂದೆಯಷ್ಟೇ ಟಾಮ್ ಕರನ್ ಐಪಿಎಲ್ನಲ್ಲಿ ಹರಾಜಾಗಿದ್ದರು. 1.50 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್ರೌಂಡರ್ ಅನ್ನು ಆರ್ಸಿಬಿ ಖರೀದಿಸಿತ್ತು. ಇದೀಗ ಅನುಚಿತ ವರ್ತನೆಯಿಂದಾಗಿ ಟಾಮ್ ಕರನ್ ಸುದ್ದಿಯಾಗಿದ್ದಾರೆ.

ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿ 64 ರನ್ ಕಲೆಹಾಕಿದ್ದಾರೆ. ಇನ್ನು ಐಪಿಎಲ್ನಲ್ಲಿ ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ. ಈ ವೇಳೆ 13 ವಿಕೆಟ್ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
























