ಟೋನಿ ಟನ್… ದಾಖಲೆಯ ಸೆಂಚುರಿ ಸಿಡಿಸಿದ ಝೋರ್ಝಿ

Bangladesh vs South Africa: ಬಾಂಗ್ಲಾದೇಶ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ಇಬ್ಬರು ದಾಂಡಿಗರು ಶತಕ ಬಾರಿಸಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಟೋನಿ ಡಿ ಝೋರ್ಝಿ ಅಜೇಯ 141 ರನ್ ಬಾರಿಸಿದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಯುವ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ 106 ರನ್ ಕಲೆಹಾಕಿದ್ದಾರೆ.

|

Updated on:Oct 30, 2024 | 8:38 AM

ಚಟ್ಟೋಗ್ರಾಮ್​ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಟೋನಿ ಡಿ ಝೋರ್ಝಿ ಭರ್ಜರಿ ಶತಕ ಸಿಡಿಸುವ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೋನಿ ಡಿ ಝೋರ್ಝಿ ಹಾಗೂ ಐಡೆನ್ ಮಾರ್ಕ್ರಾಮ್ ಮೊದಲ ವಿಕೆಟ್​ಗೆ 69 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಮಾರ್ಕ್ರಾಮ್ (33) ವಿಕೆಟ್ ಒಪ್ಪಿಸಿದರು.

2 / 5
ಇದಾಗ್ಯೂ ಆಕರ್ಷಕ ಬ್ಯಾಟಿಂಗ್ ಮುಂದುವರೆಸಿದ ಟೋನಿ ಡಿ ಝೋರ್ಝಿ ಬಾಂಗ್ಲಾ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಈ ಮೂಲಕ ಕೇವಲ 146 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ಬಾಂಗ್ಲಾದೇಶ್ ವಿರುದ್ಧ ಶತಕ ಬಾರಿಸಿದ ಸೌತ್ ಆಫ್ರಿಕಾದ ಮೂರನೇ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾದರು.

3 / 5
ಇದಕ್ಕೂ ಮುನ್ನ ಸೌತ್ ಆಫ್ರಿಕಾ ತಂಡದ ಮಾಜಿ ಆರಂಭಿಕರಾದ ಗ್ರೇಮ್ ಸ್ಮಿತ್ ಹಾಗೂ ನೀಲ್ ಮೆಕೆಂಝಿ ಮಾತ್ರ ಬಾಂಗ್ಲಾದೇಶ್ ವಿರುದ್ಧ ಸೆಂಚುರಿ ಸಿಡಿಸಿದ್ದರು. ಇದೀಗ ಬರೋಬ್ಬರಿ 16 ವರ್ಷಗಳ ಬಳಿಕ ಸೌತ್ ಆಫ್ರಿಕಾ ತಂಡದ ಆರಂಭಿಕರೊಬ್ಬರು ಬಾಂಗ್ಲಾದೇಶ್ ವಿರುದ್ಧ ಟೆಸ್ಟ್​ನಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೋನಿ ಝೋರ್ಝಿ ವಿಶೇಷ ಸಾಧನೆ ಮಾಡಿದ್ದಾರೆ.

4 / 5
ಇನ್ನು ಟೋನಿ ಡಿ ಝೋರ್ಝಿಗೆ ಉತ್ತಮ ಸಾಥ್ ನೀಡಿದ ಟ್ರಿಸ್ಟನ್ ಸ್ಬಬ್ಸ್ ಕೂಡ ಸೆಂಚುರಿ ಸಿಡಿಸಿದರು. 198 ಎಸೆತಗಳನ್ನು ಎದುರಿಸಿದ ಸ್ಟಬ್ಸ್ 106 ರನ್ ಬಾರಿಸಿ ಔಟಾದರು. ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತ ಟೋನಿ ಡಿ ಝೋರ್ಝಿ 211 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 141 ರನ್​ ಗಳಿಸಿದ್ದಾರೆ. ಈ ಅಜೇಯ ಶತಕದೊಂದಿಗೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡವು 2 ವಿಕೆಟ್ ಕಳೆದುಕೊಂಡು 307 ರನ್ ಕಲೆಹಾಕಿದೆ.

5 / 5

Published On - 8:00 am, Wed, 30 October 24

Follow us
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ

Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ

ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ

ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ

ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ

ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ

ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ

ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು

ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ