AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್‌ನಲ್ಲಿ ಅಧಿಕ ಸೊನ್ನೆ; ಆರ್​ಸಿಬಿ ಆಟಗಾರರದ್ದೇ ಪಾರುಪತ್ಯ

5 IPL Stars with Highest Number of Ducks: ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟ್ ಆದ ಐದು ಆಟಗಾರರ ಪಟ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ರೋಹಿತ್ ಶರ್ಮಾ, ಪಿಯೂಷ್ ಚಾವ್ಲಾ ಮತ್ತು ಸುನಿಲ್ ನರೈನ್ ಅಗ್ರ ಐದು ಸ್ಥಾನದಲ್ಲಿದ್ದಾರೆ. ಆದಾಗ್ಯೂ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ದಾಖಲೆ ಮಾಜಿ ಆರ್​ಸಿಬಿ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಅವರ ಹೆಸರಿನಲ್ಲಿದೆ.

ಪೃಥ್ವಿಶಂಕರ
|

Updated on: Mar 14, 2025 | 10:22 PM

Share
ಐಪಿಎಲ್‌ನಲ್ಲಿ ಬ್ಯಾಟರ್​ಗಳ ಆರ್ಭಟಕ್ಕೆ ಹೆಚ್ಚು ಪ್ರಾಮುಖ್ಯತೆ. ತರಹೆವಾರಿ ಶಾಟ್​ಗಳ ಮೂಲಕ ಅಭಿಮಾನಿಗಳನ್ನುಹುಚ್ಚೆದ್ದು ಕುಣಿಯುವಂತೆ ಮಾಡುವ ಬ್ಯಾಟ್ಸ್‌ಮನ್​ಗಳನ್ನು ಕ್ಷಣ ಮಾತ್ರದಲ್ಲಿ ಪೆವಿಲಿಯನ್‌ಗಟ್ಟುವ ಕಲೆಯನ್ನು ಗರಗತ ಮಾಡಿಕೊಂಡಿರುವ ಬೌಲರ್​ಗಳನ್ನು ಈ ಲೀಗ್​ನಲ್ಲಿ ಕಾಣಬಹುದಾಗಿದೆ. ಹಾಗೆಯೇ ಬರೀ ಹೊಡಿಬಡಿ ಆಟಕ್ಕೆ ಹೆಚ್ಚು ಹೆಸರುವಾಸಿಯಾಗಿರುವ ಈ ಲೀಗ್​ನಲ್ಲೂ ಕೆಲವು ಆಟಗಾರರಿದ್ದಾರೆ. ಅವರು ಸೊನ್ನೆ ಸುತ್ತುವುದರಲ್ಲಿ ಎತ್ತಿದ್ದ ಕೈ. ಅಂತಹ ಐವರು ಬ್ಯಾಟರ್​ಗಳ ವಿವರ ಇಲ್ಲಿದೆ.

1 / 6
ಗ್ಲೆನ್ ಮ್ಯಾಕ್ಸ್‌ವೆಲ್:ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ನಾಚಿಕೆಗೇಡಿನ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್‌ವೆಲ್ ಜಂಟಿಯಾಗಿ ಹೊಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮ್ಯಾಕ್ಸ್‌ವೆಲ್ ಇದುವರೆಗೆ ಒಟ್ಟು 18 ಬಾರಿ ಖಾತೆ ತೆರೆಯದೆ ಪೆವಿಲಿಯನ್‌ ಸೇರಿಕೊಂಡಿದ್ದಾರೆ.

2 / 6
ದಿನೇಶ್ ಕಾರ್ತಿಕ್ ಕೂಡ ಐಪಿಎಲ್‌ನಲ್ಲಿ ಒಟ್ಟು 18 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿಜೀವನಕ್ಕೆ ಪೂರ್ಣವಿರಾಮ ಹಾಕಿದ್ದು, ಮುಂಬರುವ ಸೀಸನ್​ನಲ್ಲಿ ಅವರು ಆಡುವುದನ್ನು ಕಾಣುವುದಿಲ್ಲ. ಅವರು ಕಳೆದ ಎರಡು ಸೀಸನ್​ಗಳಲ್ಲಿ ಆರ್‌ಸಿಬಿಯ ಭಾಗವಾಗಿದ್ದರು ಮತ್ತು ಫಿನಿಷರ್ ಆಗಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು.

3 / 6
ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಚಾಂಪಿಯನ್ ಆಗಿ ಮಾಡಿದ ನಾಯಕ ರೋಹಿತ್ ಶರ್ಮಾ ಅವರ ಹೆಸರೂ ಕೂಡ ಈ ಪಟ್ಟಿಯಲ್ಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹಿಟ್‌ಮ್ಯಾನ್ ಒಟ್ಟು 17 ಬಾರಿ ಖಾತೆ ತೆರೆಯದೆ ಔಟಾಗಿದ್ದಾರೆ.

4 / 6
ತಮ್ಮ ಸ್ಪಿನ್ ಮೂಲಕ ಎಂತಹ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟುವ ಕಲೆ ಹೊಂದಿರುವ ಪಿಯೂಷ್ ಚಾವ್ಲಾ ಕೂಡ ಐಪಿಎಲ್‌ನಲ್ಲಿ 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇದರ ಹೊರತಾಗಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಪಿಯೂಷ್ ಎರಡನೇ ಸ್ಥಾನದಲ್ಲಿದ್ದಾರೆ.

5 / 6
ಕಳೆದ ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸುನಿಲ್ ನರೈನ್ ಕೂಡ ಈ ಲೀಗ್‌ನಲ್ಲಿ 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ನರೈನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದು, ಆರಂಭಿಕ ಆಟಗಾರರಾಗಿ ಪವರ್‌ಪ್ಲೇನಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸುತ್ತಿದ್ದಾರೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ