
ಐಪಿಎಲ್‌ನಲ್ಲಿ ಬ್ಯಾಟರ್ಗಳ ಆರ್ಭಟಕ್ಕೆ ಹೆಚ್ಚು ಪ್ರಾಮುಖ್ಯತೆ. ತರಹೆವಾರಿ ಶಾಟ್ಗಳ ಮೂಲಕ ಅಭಿಮಾನಿಗಳನ್ನುಹುಚ್ಚೆದ್ದು ಕುಣಿಯುವಂತೆ ಮಾಡುವ ಬ್ಯಾಟ್ಸ್‌ಮನ್‌ಗಳನ್ನು ಕ್ಷಣ ಮಾತ್ರದಲ್ಲಿ ಪೆವಿಲಿಯನ್‌ಗಟ್ಟುವ ಕಲೆಯನ್ನು ಗರಗತ ಮಾಡಿಕೊಂಡಿರುವ ಬೌಲರ್ಗಳನ್ನು ಈ ಲೀಗ್‌ನಲ್ಲಿ ಕಾಣಬಹುದಾಗಿದೆ. ಹಾಗೆಯೇ ಬರೀ ಹೊಡಿಬಡಿ ಆಟಕ್ಕೆ ಹೆಚ್ಚು ಹೆಸರುವಾಸಿಯಾಗಿರುವ ಈ ಲೀಗ್ನಲ್ಲೂ ಕೆಲವು ಆಟಗಾರರಿದ್ದಾರೆ. ಅವರು ಸೊನ್ನೆ ಸುತ್ತುವುದರಲ್ಲಿ ಎತ್ತಿದ್ದ ಕೈ. ಅಂತಹ ಐವರು ಬ್ಯಾಟರ್ಗಳ ವಿವರ ಇಲ್ಲಿದೆ.

ಗ್ಲೆನ್ ಮ್ಯಾಕ್ಸ್‌ವೆಲ್:ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ನಾಚಿಕೆಗೇಡಿನ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್‌ವೆಲ್ ಜಂಟಿಯಾಗಿ ಹೊಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮ್ಯಾಕ್ಸ್‌ವೆಲ್ ಇದುವರೆಗೆ ಒಟ್ಟು 18 ಬಾರಿ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡಿದ್ದಾರೆ.

ದಿನೇಶ್ ಕಾರ್ತಿಕ್ ಕೂಡ ಐಪಿಎಲ್‌ನಲ್ಲಿ ಒಟ್ಟು 18 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿಜೀವನಕ್ಕೆ ಪೂರ್ಣವಿರಾಮ ಹಾಕಿದ್ದು, ಮುಂಬರುವ ಸೀಸನ್ನಲ್ಲಿ ಅವರು ಆಡುವುದನ್ನು ಕಾಣುವುದಿಲ್ಲ. ಅವರು ಕಳೆದ ಎರಡು ಸೀಸನ್ಗಳಲ್ಲಿ ಆರ್‌ಸಿಬಿಯ ಭಾಗವಾಗಿದ್ದರು ಮತ್ತು ಫಿನಿಷರ್ ಆಗಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು.

ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಚಾಂಪಿಯನ್ ಆಗಿ ಮಾಡಿದ ನಾಯಕ ರೋಹಿತ್ ಶರ್ಮಾ ಅವರ ಹೆಸರೂ ಕೂಡ ಈ ಪಟ್ಟಿಯಲ್ಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹಿಟ್‌ಮ್ಯಾನ್ ಒಟ್ಟು 17 ಬಾರಿ ಖಾತೆ ತೆರೆಯದೆ ಔಟಾಗಿದ್ದಾರೆ.

ತಮ್ಮ ಸ್ಪಿನ್ ಮೂಲಕ ಎಂತಹ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗಟ್ಟುವ ಕಲೆ ಹೊಂದಿರುವ ಪಿಯೂಷ್ ಚಾವ್ಲಾ ಕೂಡ ಐಪಿಎಲ್‌ನಲ್ಲಿ 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇದರ ಹೊರತಾಗಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಪಿಯೂಷ್ ಎರಡನೇ ಸ್ಥಾನದಲ್ಲಿದ್ದಾರೆ.

ಕಳೆದ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸುನಿಲ್ ನರೈನ್ ಕೂಡ ಈ ಲೀಗ್‌ನಲ್ಲಿ 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ನರೈನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದು, ಆರಂಭಿಕ ಆಟಗಾರರಾಗಿ ಪವರ್‌ಪ್ಲೇನಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸುತ್ತಿದ್ದಾರೆ.