Updated on:Jun 07, 2023 | 9:47 PM
WTC Final 2023: ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ್ದರು. ಪರಿಣಾಮ ಕೇವಲ 60 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.
ಇನ್ನು ಅರ್ಧಶತಕದ ಬಳಿಕ ಕೂಡ ಟೀಮ್ ಇಂಡಿಯಾ ಬೌಲರ್ಗಳನ್ನು ನಿರಾಯಾಸವಾಗಿ ಎದುರಿಸಿದ ಹೆಡ್ 14 ಫೋರ್ ಹಾಗೂ 1 ಸಿಕ್ಸ್ನೊಂದಿಗೆ ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು.
ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಯಿತು.
ಇದಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಅತ್ಯಧಿಕ ಸ್ಕೋರ್ಗಳಿಸಿದ ದಾಖಲೆ ನ್ಯೂಜಿಲೆಂಡ್ನ ಡೆವೊನ್ ಕಾನ್ವೆ ಹೆಸರಿನಲ್ಲಿತ್ತು. 2021 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಾನ್ವೆ 54 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು.
ಇದೀಗ ಓವಲ್ ಮೈದಾನದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಟ್ರಾವಿಸ್ ಹೆಡ್ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ವಿರುದ್ಧದ ಚೊಚ್ಚಲ ಶತಕದೊಂದಿಗೆ ಎಂಬುದು ವಿಶೇಷ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.
ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ (ಉಸ್ಮಾನ್ ಖ್ವಾಜಾ), ಶಾರ್ದೂಲ್ ಠಾಕೂರ್ (ಡೇವಿಡ್ ವಾರ್ನರ್) ಹಾಗೂ ಮೊಹಮ್ಮದ್ ಶಮಿ (ಮಾರ್ನಸ್ ಲಾಬುಶೇನ್) ತಲಾ 1 ವಿಕೆಟ್ ಪಡೆದಿದ್ದಾರೆ.
Published On - 9:37 pm, Wed, 7 June 23