Travis Head: ಟೀಮ್ ಇಂಡಿಯಾ ವಿರುದ್ಧ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಟ್ರಾವಿಸ್ ಹೆಡ್

Edited By:

Updated on: Jun 07, 2023 | 9:47 PM

WTC Final 2023: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ.

1 / 8
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

2 / 8

ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಪರಿಣಾಮ ಕೇವಲ 60 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.

3 / 8

ಇನ್ನು ಅರ್ಧಶತಕದ ಬಳಿಕ ಕೂಡ ಟೀಮ್ ಇಂಡಿಯಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಹೆಡ್ 14 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು.

4 / 8

ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಯಿತು.

5 / 8

ಇದಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ನ್ಯೂಜಿಲೆಂಡ್​ನ ಡೆವೊನ್ ಕಾನ್ವೆ ಹೆಸರಿನಲ್ಲಿತ್ತು. 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಾನ್ವೆ 54 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು.

6 / 8

ಇದೀಗ ಓವಲ್ ಮೈದಾನದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಟ್ರಾವಿಸ್ ಹೆಡ್ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ವಿರುದ್ಧದ ಚೊಚ್ಚಲ ಶತಕದೊಂದಿಗೆ ಎಂಬುದು ವಿಶೇಷ.

7 / 8

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.

8 / 8

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ (ಉಸ್ಮಾನ್ ಖ್ವಾಜಾ), ಶಾರ್ದೂಲ್ ಠಾಕೂರ್ (ಡೇವಿಡ್ ವಾರ್ನರ್) ಹಾಗೂ ಮೊಹಮ್ಮದ್ ಶಮಿ (ಮಾರ್ನಸ್ ಲಾಬುಶೇನ್) ತಲಾ 1 ವಿಕೆಟ್ ಪಡೆದಿದ್ದಾರೆ.

Published On - 9:37 pm, Wed, 7 June 23

Loading...
Unable to load recommendations.
Follow Us