AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travis Head: ಟ್ರಾವಿಸ್ ಹೆಡ್ ಆರ್ಭಟಕ್ಕೆ ಹಳೆಯ ದಾಖಲೆಗಳು ಛಿದ್ರ..!

Travis Head: ಕ್ರಿಕೆಟ್ ಅಂಗಳದಲ್ಲಿ ಆಸ್ಟ್ರೇಲಿಯನ್ ಓಪನರ್ ಟ್ರಾವಿಸ್ ಹೆಡ್ ಪರಾಕ್ರಮ ಮುಂದುವರೆದಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​​ನೊಂದಿಗೆ ಹಲವು ದಾಖಲೆ ನಿರ್ಮಿಸಿದ್ದ ಹೆಡ್ ಇದೀಗ ಏಕದಿನ ಪಂದ್ಯದಲ್ಲೂ ಸ್ಪೋಟಕ ಇನಿಂಗ್ಸ್​ ಆಡಿದ್ದಾರೆ. ಈ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 21, 2024 | 2:54 PM

Share
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್​ ಮೈದಾನದಲ್ಲಿ ನಡೆದ ಈ ಪಂದ್ಯದ ಗೆಲುವಿನ ರೂವಾರಿ ಆಸ್ಟ್ರೇಲಿಯಾ ತಂಡದ ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಬೆನ್ ಡೆಕಟ್ 95 ರನ್ ಬಾರಿಸಿ ಅಬ್ಬರಿಸಿದರು. ಆ ಬಳಿಕ ಬಂದ ವಿಲ್ ಜಾಕ್ಸ್ 62 ರನ್​ಗಳ ಕೊಡುಗೆ ನೀಡಿದರು. ಈ ಅರ್ಧಶತಕಗಳ ನೆರವಿನಿಂದ ಇಂಗ್ಲೆಂಡ್ ತಂಡವು 49.4 ಓವರ್​ಗಳಲ್ಲಿ 315 ರನ್​ಗಳಿಸಿ ಆಲೌಟ್ ಆಯಿತು.

2 / 7
316 ರನ್​ಗಳ ಕಠಿಣ ಗುರಿ ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಸ್ಪೋಟಕ ಆರಂಭ ಒದಗಿಸಿದರು. ಇಂಗ್ಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಹೆಡ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ಹೆಡ್ ಕೇವಲ 111 ಎಸೆತಗಳಲ್ಲಿ ಶತಕ ಪೂರೈಸಿದರು.

3 / 7
ಶತಕದ ಬಳಿಕವೂ ಸಿಡಿಲಬ್ಬರದ ಮುಂದುವರೆಸಿದ ಟ್ರಾವಿಡ್ ಹೆಡ್ 129 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 20 ಫೋರ್​ಗಳೊಂದಿಗೆ ಅಜೇಯ 154 ರನ್ ಬಾರಿಸಿದರು. ಈ ಮೂಲಕ 44 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು 317 ರನ್​ಗಳ ಗುರಿ ತಲುಪಿಸಿ 7 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಟ್ರಾವಿಸ್ ಹೆಡ್ ಹಲವು ದಾಖಲೆಗಳನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂದರೆ...

4 / 7
ನಾಟಿಂಗ್​ಹ್ಯಾಮ್ ಟ್ರೆಂಟ್ ಬ್ರಿಡ್ಜ್​ ಮೈದಾನದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಗರಿಷ್ಠ ವೈಯುಕ್ತಿಕ ಮೊತ್ತ ಕಲೆಹಾಕಿದ ದಾಖಲೆ ಟ್ರಾವಿಸ್ ಹೆಡ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (137) ಹೆಸರಿನಲ್ಲಿತ್ತು. ಇದೀಗ 154 ರನ್​ ಬಾರಿಸುವ ಮೂಲಕ ಹೆಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 7
ಹಾಗೆಯೇ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ 2 ಬಾರಿ 150+ ಸ್ಕೋರ್​ಗಳಿಸಿದ ಆಸ್ಟ್ರೇಲಿಯಾದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಟ್ರಾವಿಸ್ ಹೆಡ್ ಪಾತ್ರರಾಗಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಗರಿಷ್ಠ ಸ್ಕೋರ್​ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಶೇನ್ ವಾಟ್ಸನ್ (161) ಅಗ್ರಸ್ಥಾನದಲ್ಲಿದ್ದಾರೆ.

6 / 7
ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಅತ್ಯಧಿಕ ಫೋರ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಕೂಡ ಹೆಡ್ ಪಾಲಾಗಿದೆ. ಈ ಪಂದ್ಯದಲ್ಲಿ 20 ಬೌಂಡರಿಗಳನ್ನು ಸಿಡಿಸಿ ಟ್ರಾವಿಸ್ ಹೆಡ್ ಈ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಸ್ಪೋಟಕ ಸೆಂಚುರಿಯೊಂದಿಗೆ ಹೆಡ್ 'ಮಾಸ್ಟರ್ ಸ್ಟ್ರೋಕ್' ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

7 / 7
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ