AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ್ದು ಯಾರು ಗೊತ್ತೇ?

Travis Head Century: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಶತಕ ಬಾರಿಸಿದ ವಿಶ್ವ ದಾಖಲೆ ನ್ಯೂಜಿಲೆಂಡ್​ನ ಬ್ರೆಂಡನ್ ಮೆಕಲಂ ಹೆಸರಿನಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 07, 2023 | 11:07 PM

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾದ ಎಡಗೈ ದಾಂಡಿಗ 14 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದ್ದರು.

1 / 9
ಈ ಸ್ಪೋಟಕ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಟ್ರಾವಿಸ್ ಹೆಡ್ ಪಾಲಾಗಿದೆ. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಆಸ್ಟ್ರೇಲಿಯಾದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 9
ಇದಕ್ಕೂ ಮುನ್ನ ಭಾರತದ ವಿರುದ್ಧ ಡೇವಿಡ್ ವಾರ್ನರ್ ಹಾಗೂ ಆ್ಯಡಂ ಗಿಲ್​ಕ್ರಿಸ್ಟ್ ಟೆಸ್ಟ್​ ಕ್ರಿಕೆಟ್​ನಲ್ಲಿ ವೇಗದ ಸೆಂಚುರಿಸಿ ಸಿಡಿಸಿದ್ದರು. ಹಾಗಿದ್ರೆ ಟೀಮ್ ಇಂಡಿಯಾ ವಿರುದ್ಧ ಅತೀ ವೇಗದ ಟೆಸ್ಟ್ ಸೆಂಚುರಿ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 9
1- ಡೇವಿಡ್ ವಾರ್ನರ್: 2011 ರಲ್ಲಿ ಆಸ್ಟ್ರೇಲಿಯಾದ ಪರ್ತ್​ನಲ್ಲಿ ನಡೆದ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಡೇವಿಡ್ ವಾರ್ನರ್ ಕೇವಲ 69 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಟೀಮ್ ಇಂಡಿಯಾ ವಿರುದ್ಧ ಮೂಡಿಬಂದ ಅತೀ ವೇಗದ ಟೆಸ್ಟ್ ಶತಕ ಎಂಬುದು ವಿಶೇಷ.

4 / 9
2- ಎಬಿ ಡಿವಿಲಿಯರ್ಸ್: 2010 ರಲ್ಲಿ ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ಎಬಿ ಡಿವಿಲಿಯರ್ಸ್ ಸೆಂಚುರಿಯನ್ ಮೈದಾನದಲ್ಲಿ ​ ಟೀಮ್ ಇಂಡಯಾ ವಿರುದ್ಧ ಕೇವಲ 75 ಎಸೆತಗಳಲ್ಲಿ ಶತಕ ಬಾರಿಸಿದ್ದರು.

5 / 9
3- ಶಾಹಿದ್ ಅಫ್ರಿದಿ: 2005 ರಲ್ಲಿ ಲಾಹೋರ್​ನಲ್ಲಿ ನಡೆದ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಶಾಹಿದ್ ಅಫ್ರಿದಿ ಕೇವಲ 78 ಎಸೆತಗಳಲ್ಲಿ ಸೆಂಚುರಿ ಪೂರೈಸಿದ್ದರು.

6 / 9
4- ಕಮ್ರಾನ್ ಅಕ್ಮಲ್: 2005 ರಲ್ಲಿ ನಡೆದ ಲಾಹೋರ್ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕಮ್ರಾನ್ ಅಕ್ಮಲ್ 81 ಎಸೆತಗಳಲ್ಲಿ ಶತಕ ಬಾರಿಸಿದ್ದರು.

7 / 9
5- ಆ್ಯಡಂ ಗಿಲ್​ಕ್ರಿಸ್ಟ್​: 2000 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಎಡಗೈ ದಾಂಡಿಗ ಆ್ಯಡಂ ಗಿಲ್​ಕ್ರಿಸ್ಟ್ ಕೇವಲ 84 ಎಸೆತಗಳಲ್ಲಿ ಶತಕ ಪೂರೈಸಿದ್ದರು.

8 / 9
ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಶತಕ ಬಾರಿಸಿದ ವಿಶ್ವ ದಾಖಲೆ ನ್ಯೂಜಿಲೆಂಡ್​ನ ಬ್ರೆಂಡನ್ ಮೆಕಲಂ ಹೆಸರಿನಲ್ಲಿದೆ. 2015 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೆಕಲಂ ಕೇವಲ 54 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

9 / 9
Follow us
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?

ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ

ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?

ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ

ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ

ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್

‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು

ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ