Travis Head: ಫಿಫ್ಟಿ, ಅರ್ಧಶತಕ, ಫಿಫ್ಟಿ… ಭರ್ಜರಿ ದಾಖಲೆ ಬರೆದ ಟ್ರಾವಿಸ್ ಹೆಡ್

Updated on: Jul 29, 2024 | 11:23 AM

T20 Cricket Records: ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾದ ಸ್ಪೋಟಕ ದಾಂಡಿಗ ಟ್ರಾವಿಡ್ ಹೆಡ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ 5 ಅರ್ಧಶತಕಗಳನ್ನು ಸಿಡಿಸುವ ಮೂಲಕ ಎಂಬುದು ಎಂಬುದು ವಿಶೇಷ. ಇದಾಗ್ಯೂ ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಭಾರತೀಯ ಕ್ರಿಕೆಟಿಗ ಎಂಬುದು ಮತ್ತೊಂದು ವಿಶೇಷ.

1 / 6
ಅಮೆರಿಕದಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಸತತ 5 ಅರ್ಧಶತಕಗಳನ್ನು ಬಾರಿಸುವ ಮೂಲಕ ಆಸ್ಟ್ರೇಲಿಯಾ ಬ್ಯಾಟರ್ ಟ್ರಾವಿಸ್ ಹೆಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಮ್ ಪರ ಕಣಕ್ಕಿಳಿದ ಹೆಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಅಮೆರಿಕದಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಸತತ 5 ಅರ್ಧಶತಕಗಳನ್ನು ಬಾರಿಸುವ ಮೂಲಕ ಆಸ್ಟ್ರೇಲಿಯಾ ಬ್ಯಾಟರ್ ಟ್ರಾವಿಸ್ ಹೆಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಮ್ ಪರ ಕಣಕ್ಕಿಳಿದ ಹೆಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

2 / 6

ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 32 ಎಸೆತಗಳಲ್ಲಿ 54 ರನ್ ಬಾರಿಸಿದ್ದ ಟ್ರಾವಿಸ್ ಹೆಡ್, ಆ ಬಳಿಕ ಎಂಐ ನ್ಯೂಯಾರ್ಕ್​ ವಿರುದ್ಧದ ಪಂದ್ಯದಲ್ಲಿ 33 ಎಸೆತಗಳಲ್ಲಿ 54 ರನ್ ಸಿಡಿಸಿದ್ದರು. ಇನ್ನು ಟೆಕ್ಸಾಸ್ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 22 ಎಸೆತಗಳಲ್ಲಿ 53 ರನ್ ಚಚ್ಚಿದ್ದರು.

3 / 6

ಹಾಗೆಯೇ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ವಿರುದ್ಧದ ಪಂದ್ಯಗಳಲ್ಲಿ 56 ಹಾಗೂ 77 ರನ್​ಗಳನ್ನು ಸಿಡಿಸಿದ್ದರು. ಈ ಮೂಲಕ ಸತತ 5 ಇನಿಂಗ್ಸ್​ಗಳಲ್ಲಿ ಅರ್ಧಶತಕ ಸಿಡಿಸಿದ ಆಸ್ಟ್ರೇಲಿಯಾದ 2ನೇ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ಸಾಧನೆ ಮಾಡಿದ ಆಟಗಾರನೆಂದರೆ ಡೇವಿಡ್ ವಾರ್ನರ್.

4 / 6

2019 ರ ಐಪಿಎಲ್​ನಲ್ಲಿ ಡೇವಿಡ್ ವಾರ್ನರ್ ಸತತ ಐದು ಅರ್ಧಶತಕಗಳನ್ನು ಸಿಡಿಸಿ ಭರ್ಜರಿ ದಾಖಲೆ ಬರೆದಿದ್ದಾರೆ. ಅಂದು ಸನ್​ರೈಸರ್ಸ್ ಹೈದರಾಬಾದ್ ಪರ ಆಡಿದ್ದ ವಾರ್ನರ್, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

5 / 6

ಇದೀಗ ಅಮೆರಿಕನ್ ಟಿ20 ಲೀಗ್​ನಲ್ಲಿ ಸತತ ಐದು ಅರ್ಧಶತಕ ಸಿಡಿಸಿ​ ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಆಸ್ಟ್ರೇಲಿಯನ್ ಎನಿಸಿಕೊಂಡಿದ್ದಾರೆ.

6 / 6

ಅಂದಹಾಗೆ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ದಾಖಲೆ ಇರುವುದು ರಿಯಾನ್ ಪರಾಗ್ ಹೆಸರಿನಲ್ಲಿ. 2023 ರಲ್ಲಿ ನಡೆದ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅಸ್ಸಾಂ ಪರ ಕಣಕ್ಕಿಳಿದ ರಿಯಾನ್ ಸತತ 7 ಅರ್ಧಶತಕಗಳನ್ನು ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Loading...
Unable to load recommendations.
Follow Us