ಟೀಮ್ ಇಂಡಿಯಾಗೆ ಢವಢವ: ನಾಕೌಟ್​ ಪಂದ್ಯಗಳಲ್ಲಿ ‘ಹೆಡ್’​ ಲೈನ್

Updated on: Mar 04, 2025 | 11:02 AM

India vs Australia: ಚಾಂಪಿಯನ್ಸ್ ಟ್ರೋಫಿಯ ಮೊದಲ ನಾಕೌಟ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. 2023ರ ಏಕದಿನ ವಿಶ್ವಕಪ್ ಸೋಲಿನ ಬಳಿಕ ಉಭಯ ತಂಡಗಳು 50 ಓವರ್​ಗಳ ಪ್ರಮುಖ ಪಂದ್ಯದಲ್ಲಿ ಮತ್ತೆ ಮುಖಾಮುಖಿಯಾಗುತ್ತಿದೆ. ಹೀಗಾಗಿಯೇ ಈ ಪಂದ್ಯದ ಫಲಿತಾಂಶವನ್ನು ಇಡೀ ವಿಶ್ವದ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದೆ.

1 / 7
ಚಾಂಪಿಯನ್ಸ್ ಟ್ರೊಫಿ 2025ರ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಹಾಗೆಯೇ ಸೋಲುವ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಅಂತ್ಯವಾಗಲಿದೆ.

ಚಾಂಪಿಯನ್ಸ್ ಟ್ರೊಫಿ 2025ರ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಹಾಗೆಯೇ ಸೋಲುವ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಅಂತ್ಯವಾಗಲಿದೆ.

2 / 7

ಅತ್ತ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರು ಈ ಪಂದ್ಯಕ್ಕೆ ಅಲಭ್ಯರಾಗಿರುವುದು ಟೀಮ್ ಇಂಡಿಯಾ ಚಿಂತೆಯನ್ನು ತುಸು ಕಡಿಮೆ ಮಾಡಿದರೂ, ಭಾರತ ತಂಡಕ್ಕೆ ಟ್ರಾವಿಸ್ ಹೆಡ್​ನ ತಲೆನೋವು ಇದ್ದೇ ಇದೆ. ಅದರಲ್ಲೂ ನಾಕೌಟ್ ಪಂದ್ಯವಾಗಿರುವುದರಿಂದ ಹೆಡ್ ಟೀಮ್ ಇಂಡಿಯಾದ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

3 / 7

ಏಕೆಂದರೆ ಟ್ರಾವಿಸ್ ಹೆಡ್ ಐಸಿಸಿ ಟೂರ್ನಿಗಳಲ್ಲಿ ಕೇವಲ 3 ನಾಕೌಟ್ ಪಂದ್ಯಗಳನ್ನಾಡಿದ್ದಾರೆ. ಈ ಮೂರು ಪಂದ್ಯಗಳಲ್ಲೂ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ ಎಂಬುದು ವಿಶೇಷ. ಅಂದರೆ ನಿರ್ಣಾಯಕ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನ ನೀಡುವಲ್ಲಿ ಹೆಡ್ ಒಂದೆಜ್ಜೆ ಮುಂದಿದ್ದಾರೆ. ಇದಕ್ಕೆ ಸಾಕ್ಷಿಯಾಗಿ....

4 / 7

2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಟ್ರಾವಿಸ್ ಹೆಡ್ ಆಡಿದ ಇನಿಂಗ್ಸ್​ ನೆನಪಿಸಿಕೊಳ್ಳಬಹುದು. ಲಂಡನ್​ನ ಓವಲ್ ಮೈದಾನದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಹೆಡ್ 174 ಎಸೆತಗಳಲ್ಲಿ 163 ರನ್ ಬಾರಿಸಿದ್ದರು. ಈ ಭರ್ಜರಿ ಇನಿಂಗ್ಸ್​ನಿಂದಾಗಿ ಅಂದು ಟೀಮ್ ಇಂಡಿಯಾ ಸೋಲನುಭವಿಸಿತ್ತು.

5 / 7

ಇನ್ನು 2023ರ ಏಕದಿನ ವಿಶ್ವಕಪ್​ ಸೆಮಿಫೈನಲ್ ಪಂದ್ಯದಲ್ಲೂ ಆಸ್ಟ್ರೇಲಿಯಾ ಪರ ಅಬ್ಬರಿಸಿದ್ದು ಟ್ರಾವಿಸ್ ಹೆಡ್. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ 212 ರನ್ ಕಲೆಹಾಕಿತು. ಆದರೆ ಇತ್ತ ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ಆಡಿದ ಟ್ರಾವಿಸ್ ಹೆಡ್ 48 ಎಸೆತಗಳಲ್ಲಿ 62 ರನ್ ಬಾರಿಸಿದರು. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಜಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.

6 / 7

2023ರ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯದ ಹೀರೋ ಟ್ರಾವಿಸ್ ಹೆಡ್. ಭಾರತೀಯ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದ ಅಹಮದಾಬಾದ್​ ಪಿಚ್​ನಲ್ಲಿ ಹೆಡ್ 120 ಎಸೆತಗಳಲ್ಲಿ 137 ರನ್ ಬಾರಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

7 / 7

ಅಂದರೆ ಟ್ರಾವಿಸ್ ಹೆಡ್ ಆಡಿದ ಮೂರು ನಾಕೌಟ್ ಪಂದ್ಯಗಳಲ್ಲೂ ಭರ್ಜರಿ ಪ್ರದರ್ಶನವನ್ನೇ ನೀಡಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ನಾಕೌಟ್ ಪಂದ್ಯದಲ್ಲಿ ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಹೆಡ್​ಗಾಗಿ ಹೊಸ ರಣತಂತ್ರ ರೂಪಿಸಲೇಬೇಕು.

Published On - 9:53 am, Tue, 4 March 25

Loading...
Unable to load recommendations.
Follow Us