ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

Updated on: Nov 22, 2025 | 3:07 PM

Travis Head Record: ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲೇ ಟ್ರಾವಿಸ್ ಹೆಡ್ ವಿಸ್ಫೋಟಕ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಬರೆದಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಟೆಸ್ಟ್ ಕ್ರಿಕೆಟ್​ನಲ್ಲೂ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಶುರುವಾಗಿದೆ. ಅದು ಕೂಡ ಆರಂಭಿಕನಾಗಿ. ಪರ್ತ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯದ ದ್ಬಿತೀಯ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಟ್ರಾವಿಸ್ ಹೆಡ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

2 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 205 ರನ್​ಗಳ ಗುರಿ ಬೆನ್ನತ್ತಲು ಆಗಮಿಸಿದ ಟ್ರಾವಿಸ್ ಹೆಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದ ಹೆಡ್ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

3 / 5
ಹಾಫ್ ಸೆಂಚುರಿಯೊಂದಿಗೆ ಸಿಡಿಲಬ್ಬರ ಮುಂದುವರೆಸಿದ ಟ್ರಾವಿಸ್ ಹೆಡ್ ಕೇವಲ 69 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಆರಂಭಿಕ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ಹೆಡ್ ತಮ್ಮದಾಗಿಸಿಕೊಂಡರು.

4 / 5
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. 2012 ರಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಾರ್ನರ್ 69 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಟ್ರಾವಿಸ್ ಹೆಡ್ ಅಗ್ರಸ್ಥಾನಕ್ಕೇರಿದ್ದಾರೆ.

5 / 5
ಅಷ್ಟೇ ಅಲ್ಲದೆ ಆ್ಯಶಸ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಆ್ಯಡಂ ಗಿಲ್​ಕ್ರಿಸ್ಟ್ (57) ಅಗ್ರಸ್ಥಾನದಲ್ಲಿದ್ದು, ಇದೀಗ 69 ಎಸೆತಗಳ ಸೆಂಚುರಿಯೊಂದಿಗೆ ಟ್ರಾವಿಸ್ ಹೆಡ್ ಆ್ಯಶಸ್​ನ ಸ್ಫೋಟಕ ಸೆಂಚುರಿ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.