ಆಸ್ಟ್ರೇಲಿಯಾ ತಂಡದ ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್ನಲ್ಲಿ 140 ರನ್ ಸಿಡಿಸಿ ಅಬ್ಬರಿಸಿದ್ದ ಹೆಡ್, ಇದೀಗ ಬ್ರಿಸ್ಬೇನ್ ಟೆಸ್ಟ್ನಲ್ಲೂ 152 ರನ್ ಚಚ್ಚಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.