AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U-19 Asia Cup 2021: ಬಾಂಗ್ಲಾ ಮಣಿಸಿ ಫೈನಲ್​ಗೇರಿದ ಭಾರತದ ಯುವ ಪಡೆ! ಪ್ರಶಸ್ತಿಗಾಗಿ ಶ್ರೀಲಂಕಾ ವಿರುದ್ಧ ಸೆಣಸಾಟ

U-19 Asia Cup 2021: ಭಾರತೀಯ ಬೌಲರ್‌ಗಳು ಬಾಂಗ್ಲಾದೇಶದ ಇನ್ನಿಂಗ್ಸ್ ಅನ್ನು 38.2 ಓವರ್‌ಗಳಲ್ಲಿ ಕೇವಲ 140 ರನ್‌ಗಳಿಗೆ ಆಲೌಟ್ ಮಾಡಿ ಪಂದ್ಯವನ್ನು 103 ರನ್‌ಗಳಿಂದ ಗೆದ್ದು ಫೈನಲ್‌ಗೆ ಪ್ರವೇಶಿಸಿದರು.

TV9 Web
| Updated By: ಪೃಥ್ವಿಶಂಕರ|

Updated on: Dec 30, 2021 | 7:00 PM

Share
ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 113 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಟೀಂ ಇಂಡಿಯಾದ ಈ ಗೆಲುವನ್ನು ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಸಂಭ್ರಮಿಸುತ್ತಿದ್ದಾರೆ. ಅದೇ ಸಮಯದಲ್ಲಿ ಸೆಂಚುರಿಯನ್​ನಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಭಾರತದ ಜೂನಿಯರ್ ತಂಡವೂ ಅದ್ಭುತ ಪ್ರದರ್ಶನ ನೀಡುತ್ತಿದೆ. ಯಶ್ ಧುಲ್ ಅವರ ನಾಯಕತ್ವದಲ್ಲಿ, ಭಾರತ ಅಂಡರ್-19 ತಂಡವು ಏಷ್ಯಾಕಪ್‌ ಫೈನಲ್​ ಪ್ರವೇಶಿಸಿದೆ.

1 / 4
ಸೆಮಿಫೈನಲ್‌ನಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಎದುರಿಸಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತ್ತು. ಎಸ್ ರಶೀದ್ ಮಾತ್ರ ಟೀಂ ಇಂಡಿಯಾ ಪರ ಬಿರುಸಿನ ಬ್ಯಾಟಿಂಗ್ ಮಾಡಿದರು. ಅವರು 108 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್‌ ಒಳಗೊಂಡ 90 ರನ್‌ಗಳ ಅಜೇಯ ಇನ್ನಿಂಗ್ಸ್‌ಗಳನ್ನು ಆಡಿದರು.

2 / 4
ನಂತರ ಭಾರತೀಯ ಬೌಲರ್‌ಗಳು ಬಾಂಗ್ಲಾದೇಶದ ಮೇಲೆ ವಿಧ್ವಂಸಕ ದಾಳಿ ನಡೆಸಿದರು. ವಿಕ್ಕಿ ಓಸ್ತ್ವಾಲ್ ಮತ್ತು ರಾಜವರ್ಧನ್ ಹಂಗರ್ಗೇಕರ್ ನೇತೃತ್ವದ ಭಾರತೀಯ ಬೌಲರ್‌ಗಳು ಬಾಂಗ್ಲಾದೇಶದ ಇನ್ನಿಂಗ್ಸ್ ಅನ್ನು 38.2 ಓವರ್‌ಗಳಲ್ಲಿ ಕೇವಲ 140 ರನ್‌ಗಳಿಗೆ ಆಲೌಟ್ ಮಾಡಿ ಪಂದ್ಯವನ್ನು 103 ರನ್‌ಗಳಿಂದ ಗೆದ್ದು ಫೈನಲ್‌ಗೆ ಪ್ರವೇಶಿಸಿದರು. ಬಾಂಗ್ಲಾದೇಶ ಪರ ಅರಿಫುಲ್ ಇಸ್ಲಾಂ 42 ರನ್ ಗಳಿಸಿದರು.

3 / 4
ಇನ್ನೊಂದು ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಸಣ್ಣ ಸ್ಕೋರ್‌ನ ಹೊರತಾಗಿಯೂ ಪಾಕಿಸ್ತಾನವನ್ನು ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಇನ್ನಿಂಗ್ಸ್ 44.5 ಓವರ್ ಗಳಲ್ಲಿ ಕೇವಲ 147 ರನ್ ಗಳಿಗೆ ಆಲ್​ಔಟ್​ ಆಯಿತು. ಪಾಕಿಸ್ತಾನದ ಮುಂದೆ ಗುರಿ ದೊಡ್ಡದಾಗಿರಲಿಲ್ಲ, ಆದರೆ ಅವರು ಅದನ್ನು ಸಾಧಿಸಲು ಸಾಧ್ಯವಾಗಲಿಲ್ಲ ಮತ್ತು 49.3 ಓವರ್‌ಗಳಲ್ಲಿ ಕೇವಲ 125 ರನ್‌ಗಳಿಗೆ ಆಲೌಟ್ ಆಯಿತು.

4 / 4
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ