ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 113 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಟೀಂ ಇಂಡಿಯಾದ ಈ ಗೆಲುವನ್ನು ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಸಂಭ್ರಮಿಸುತ್ತಿದ್ದಾರೆ. ಅದೇ ಸಮಯದಲ್ಲಿ ಸೆಂಚುರಿಯನ್ನಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಭಾರತದ ಜೂನಿಯರ್ ತಂಡವೂ ಅದ್ಭುತ ಪ್ರದರ್ಶನ ನೀಡುತ್ತಿದೆ. ಯಶ್ ಧುಲ್ ಅವರ ನಾಯಕತ್ವದಲ್ಲಿ, ಭಾರತ ಅಂಡರ್-19 ತಂಡವು ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ.