- Kannada News Photo gallery Cricket photos UAE Captain Muhammad Waseem breaks Team india's Rohit Sharma’s sixes record
ವಸೀಮ್ ಆರ್ಭಟಕ್ಕೆ ರೋಹಿತ್ ಶರ್ಮಾ ವಿಶ್ವ ದಾಖಲೆಯೇ ಉಡೀಸ್
Muhammad Waseem: ಯುನೈಟೆಡ್ ಅರಬ್ ಎಮಿರೇಟ್ಸ್ ತಂಡದ ನಾಯಕ ಮುಹಮ್ಮದ್ ವಸೀಮ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್ಗಳ ಸರದಾರ ಎನಿಸಿಕೊಂಡಿರುವ ಟೀಮ್ ಇಂಡಿಯಾ ಸ್ಫೋಟಕ ದಾಂಡಿಗ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ..!
Updated on:Sep 02, 2025 | 8:26 AM

ಟಿ20 ಕ್ರಿಕೆಟ್ನಲ್ಲಿ ಯುಎಇ ತಂಡದ ನಾಯಕ ಮುಹಮ್ಮದ್ ವಸೀಮ್ (Muhammad Waseem) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಭಾರತ ಟಿ20 ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಶಾರ್ಜಾದಲ್ಲಿ ನಡೆದ ಅಫ್ಗಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮುಹಮ್ಮದ್ ವಸೀಮ್ 37 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 67 ರನ್ ಬಾರಿಸಿದ್ದರು. ಈ 6 ಸಿಕ್ಸ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆ ವಸೀಮ್ ಪಾಲಾಯಿತು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 62 ಟಿ20 ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ 105 ಸಿಕ್ಸ್ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಸೀಮ್ ಯಶಸ್ವಿಯಾಗಿದ್ದಾರೆ.

ಯುಎಇ ಪರ ನಾಯಕನಾಗಿ 54 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮುಹಮ್ಮದ್ ವಸೀಮ್ ಈವರೆಗೆ ಬಾರಿಸಿರುವ ಸಿಕ್ಸರ್ಗಳ ಬರೋಬ್ಬರಿ 110. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ಮುಹಮ್ಮದ್ ವಸೀಮ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ (205 ಸಿಕ್ಸ್) ಅಗ್ರಸ್ಥಾನದಲ್ಲಿದ್ದಾರೆ. ಇದೀಗ 176 ಸಿಕ್ಸರ್ಗಳೊಂದಿಗೆ ನ್ಯೂಝಿಲೆಂಡ್ನ ಮಾರ್ಟಿನ್ ಗಪ್ಟಿಲ್ (173 ಸಿಕ್ಸ್) ಅವರನ್ನು ಹಿಂದಿಕ್ಕಿ ಮುಹಮ್ಮದ್ ವಸೀಮ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.
Published On - 8:25 am, Tue, 2 September 25




