ವಸೀಮ್ ಆರ್ಭಟಕ್ಕೆ ರೋಹಿತ್ ಶರ್ಮಾ ವಿಶ್ವ ದಾಖಲೆಯೇ ಉಡೀಸ್

Updated on: Sep 02, 2025 | 8:26 AM

Muhammad Waseem: ಯುನೈಟೆಡ್ ಅರಬ್ ಎಮಿರೇಟ್ಸ್ ತಂಡದ ನಾಯಕ ಮುಹಮ್ಮದ್ ವಸೀಮ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್​ಗಳ ಸರದಾರ ಎನಿಸಿಕೊಂಡಿರುವ ಟೀಮ್ ಇಂಡಿಯಾ ಸ್ಫೋಟಕ ದಾಂಡಿಗ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ..!

1 / 5
ಟಿ20 ಕ್ರಿಕೆಟ್​ನಲ್ಲಿ ಯುಎಇ ತಂಡದ ನಾಯಕ ಮುಹಮ್ಮದ್ ವಸೀಮ್ (Muhammad Waseem) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಭಾರತ ಟಿ20 ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಶಾರ್ಜಾದಲ್ಲಿ ನಡೆದ ಅಫ್ಗಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮುಹಮ್ಮದ್ ವಸೀಮ್ 37 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 67 ರನ್ ಬಾರಿಸಿದ್ದರು. ಈ 6 ಸಿಕ್ಸ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆ ವಸೀಮ್ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 62 ಟಿ20 ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 105 ಸಿಕ್ಸ್ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಸೀಮ್ ಯಶಸ್ವಿಯಾಗಿದ್ದಾರೆ.

4 / 5
ಯುಎಇ ಪರ ನಾಯಕನಾಗಿ 54 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮುಹಮ್ಮದ್ ವಸೀಮ್ ಈವರೆಗೆ ಬಾರಿಸಿರುವ ಸಿಕ್ಸರ್​ಗಳ ಬರೋಬ್ಬರಿ 110. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಹಾಗೆಯೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಮುಹಮ್ಮದ್ ವಸೀಮ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ (205 ಸಿಕ್ಸ್) ಅಗ್ರಸ್ಥಾನದಲ್ಲಿದ್ದಾರೆ. ಇದೀಗ 176 ಸಿಕ್ಸರ್​ಗಳೊಂದಿಗೆ ನ್ಯೂಝಿಲೆಂಡ್​ನ ಮಾರ್ಟಿನ್ ಗಪ್ಟಿಲ್ (173 ಸಿಕ್ಸ್) ಅವರನ್ನು ಹಿಂದಿಕ್ಕಿ ಮುಹಮ್ಮದ್ ವಸೀಮ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.

Published On - 8:25 am, Tue, 2 September 25