U19 World Cup: 5 ಬಾರಿ ಚಾಂಪಿಯನ್ಸ್​, 3 ಬಾರಿ ರನ್ನರ್ ಅಪ್: ಕಿರಿಯರ ವಿಶ್ವಕಪ್​ನಲ್ಲಿ ಭಾರತದ್ದೇ ಪಾರುಪತ್ಯ

Under-19 World Cup 2024: 15ನೇ ಅಂಡರ್ 19 ವಿಶ್ವಕಪ್​ನಲ್ಲಿ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ 2 ವಿಕೆಟ್​ಗಳ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡವು ಸತತವಾಗಿ 5ನೇ ಬಾರಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹಾಗೆಯೇ ಇದು ಟೀಮ್ ಇಂಡಿಯಾದ 9ನೇ ಅಂಡರ್-19 ಫೈನಲ್​ ಪಂದ್ಯ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Feb 07, 2024 | 7:09 AM

ಅಂಡರ್​-19 ವಿಶ್ವಕಪ್​ 2024 ರ ಮೊದಲ ಸೆಮಿಫೈನಲ್​ನಲ್ಲಿ ಗೆದ್ದು ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ. ವಿಲ್ಲೊಮೂರ್ ಪಾರ್ಕ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಸೆಮಿಫೈನಲ್​ನಲ್ಲಿ ಭಾರತ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ 9ನೇ ಬಾರಿ ಟೀಮ್ ಇಂಡಿಯಾ ಕಿರಿಯರ ವಿಶ್ವಕಪ್​ನಲ್ಲಿ ಫೈನಲ್​ಗೆ ಪ್ರವೇಶಿಸಿದೆ.

1 / 8
ವಿಶೇಷ ಎಂದರೆ ಕಳೆದ 14 ಅಂಡರ್ 19 ವಿಶ್ವಕಪ್​​ನಲ್ಲಿ ಭಾರತ ತಂಡವು 5 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಇನ್ನು 3 ಬಾರಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಅಂದರೆ ಕಿರಿಯರ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾರುಪತ್ಯ ಮೆರೆಯುತ್ತಾ ಬಂದಿದೆ. ಇದೀಗ ಉದಯ್ ಸಹರಾನ್ ನಾಯಕತ್ವದಲ್ಲಿ ಭಾರತ ತಂಡವು 9ನೇ ಬಾರಿ ಫೈನಲ್ ಆಡಲಿದ್ದು, ಈ ಬಾರಿ ಕೂಡ ಟ್ರೋಫಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಹಾಗಿದ್ರೆ ಭಾರತ ತಂಡ ಯಾವಾಗ ಅಂಡರ್ 19 ವಿಶ್ವಕಪ್ ಗೆದ್ದಿತ್ತು ಎಂಬುದನ್ನು ನೋಡೋಣ...

2 / 8
2000: ಮೊಹಮ್ಮದ್ ಕೈಫ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 2000 ರಲ್ಲಿ ಮೊದಲ ಬಾರಿ ಅಂಡರ್ 19 ವಿಶ್ವಕಪ್​ನಲ್ಲಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 178 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ನಾಲ್ಕು ವಿಕೆಟ್ ಕಳೆದುಕೊಂಡು 180 ರನ್ ಗಳಿಸಿ  ಚೊಚ್ಚಲ ವಿಶ್ವಕಪ್ ಮುಡಿಗೇರಿಕೊಂಡಿತು.

3 / 8
2008: 2000 ರಲ್ಲಿ ಭಾರತ ತಂಡ ಮೊದಲ ಅಂಡರ್-19 ವಿಶ್ವಕಪ್ ಗೆದ್ದರೂ ಎರಡನೇ ಬಾರಿಗೆ ಟ್ರೋಫಿ ಗೆಲ್ಲಲು ಬರೋಬ್ಬರಿ 8 ವರ್ಷ ಕಾಯಬೇಕಾಯಿತು. 2008 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ಸೌತ್ ಆಫ್ರಿಕಾ ತಂಡವನ್ನು 12 ರನ್​ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 159 ರನ್ ಗಳಿಸಿತ್ತು. ಡಕ್​ವರ್ಥ್ ಲೂಯಿಸ್ ಪ್ರಕಾರ 25 ಓವರ್​ಗಳಲ್ಲಿ 116 ರನ್​ಗಳ ಗುರಿ ಪಡೆದ ಸೌತ್ ಆಫ್ರಿಕಾ ತಂಡವು ಕೇವಲ 103 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಟೀಮ್ ಇಂಡಿಯಾ 2ನೇ ಬಾರಿ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

4 / 8
2012: ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು 2012 ರಲ್ಲಿ ಭಾರತಕ್ಕೆ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ ಓವರ್‌ನಲ್ಲಿ 225 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6 ವಿಕೆಟ್​ಗಳ ಜಯ ಸಾಧಿಸಿತ್ತು.

5 / 8
2018: ಭಾರತ ತಂಡವು ನಾಲ್ಕನೇ ಬಾರಿಗೆ ಅಂಡರ್ 19 ವಿಶ್ವಕಪ್ ಗೆದ್ದಿದ್ದು ಪೃಥ್ವಿ ಶಾ ನಾಯಕತ್ವದಲ್ಲಿ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 216 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 2 ವಿಕೆಟ್ ಕಳೆದುಕೊಂಡು 220 ರನ್ ಬಾರಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು.

6 / 8
2022: ಕಳೆದ ಬಾರಿಯ ವಿಶ್ವಕಪ್​ನಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 190 ರನ್​ಗಳ ಗುರಿಯನ್ನು ಟೀಮ್ ಇಂಡಿಯಾ 47.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿತ್ತು. ಈ ಮೂಲಕ ಭಾರತ ತಂಡವು 5ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು.

7 / 8
ಇನ್ನು 2006, 2016, 2020 ರಲ್ಲಿ ಭಾರತ ತಂಡವು ರನ್ನರ್ ಅಪ್​ ಆಗಿ ಹೊರಹೊಮ್ಮಿತ್ತು.  ಇದೀಗ ಟೀಮ್ ಇಂಡಿಯಾ 6ನೇ ಬಾರಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಸೌತ್ ಆಫ್ರಿಕಾ ವಿರುದ್ಧ ಸೆಮಿಫೈನಲ್​ನಲ್ಲಿ ಗೆದ್ದಿರುವ ಭಾರತ ತಂಡವು ಫೈನಲ್​ನಲ್ಲಿ ಪಾಕಿಸ್ತಾನ್ ಅಥವಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

8 / 8
Follow us