WTC Points Table: ಪಾಯಿಂಟ್ಸ್ ಪಟ್ಟಿಯಲ್ಲಿ ಭಾರತಕ್ಕೆ ಭಾರಿ ಲಾಭ; ಆಂಗ್ಲರ ಪರಿಸ್ಥಿತಿ ಅಯೋಮಯ..!
WTC Points Table: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3 ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯನ್ನೂ ವಶಪಡಿಸಿಕೊಂಡಿದೆ. ಕೊನೆಯ ಪಂದ್ಯ ಬಾಕಿ ಇರುವಾಗಲೇ ಭಾರತ ತಂಡ ಈಗಾಗಲೇ ಸರಣಿಯನ್ನು ಸೀಲ್ ಮಾಡಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿಯೂ ಭಾರಿ ಲಾಭ ಪಡೆದಿದೆ.
1 / 10
ರಾಂಚಿಯಲ್ಲಿ ನಡೆದ 4ನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡವನ್ನು 5 ವಿಕೆಟ್ಗಳಿಂದವ ಮಣಿಸಿದ ಆತಿಥೇಯ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದರೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲೂ ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಿಕೊಂಡಿದೆ
2 / 10
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಟೇಬಲ್ನಲ್ಲಿ ಟೀಂ ಇಂಡಿಯಾ ಪ್ರಸ್ತುತ ಎರಡನೇ ಸ್ಥಾನದಲ್ಲಿದೆ. ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ಇದೇ ಸ್ಥಾನದಲ್ಲಿತ್ತು. ಆದರೀಗ ಆಂಗ್ಲರನ್ನು ಮಣಿಸಿ ಸರಣಿ ಗೆದ್ದಿರುವ ರೋಹಿತ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದಿದ್ದರೂ, ತಾನು ಇರುವ ಜಾಗವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ.
3 / 10
ಪಾಯಿಂಟ್ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡವು ನಂಬರ್ ಒನ್ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ನ್ಯೂಜಿಲೆಂಡ್ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು, 3ರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಕಿವೀಸ್ ಪಡೆ 75 ರಷ್ಟು ಗೆಲುವಿನ ಶೇಕಡಾವಾರುವಿನೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರೆದಿದೆ.
4 / 10
ಟೀಂ ಇಂಡಿಯಾದ ಬಗ್ಗೆ ಹೇಳುವುದಾದರೆ.. ರಾಂಚಿ ಟೆಸ್ಟ್‌ಗೂ ಮುನ್ನ ಭಾರತ 7 ಪಂದ್ಯಗಳನ್ನು ಆಡಿದ್ದು, 4ರಲ್ಲಿ ಗೆದ್ದು 2ರಲ್ಲಿ ಸೋತಿತ್ತು. ತಂಡದ ಗೆಲುವಿನ ಶೇಕಡಾವಾರು 59.52 ಆಗಿತ್ತು. ಇದರೆ ಇದೀಗ ರಾಂಚಿ ಟೆಸ್ಟ್ನಲ್ಲಿ ಗೆದ್ದಿರುವ ಟೀಂ ಇಂಡಿಯಾದ ಗೆಲುವಿನ ಶೇಕಡಾವಾರು ಹೆಚ್ಚಾಗಿದೆ.
5 / 10
ಭಾರತ ತಂಡ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿದ್ದು, 5ರಲ್ಲಿ ಗೆದ್ದು, 2ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಈ ಮೂಲಕ ಭಾರತ ತಂಡದ ಗೆಲುವಿನ ಶೇಕಡಾವಾರು 64.58ಕ್ಕೆ ಏರಿಕೆಯಾಗಿದೆ.
6 / 10
ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಲ್ಲಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಆಡಿರುವ 10 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 3ರಲ್ಲಿ ಸೋತಿದೆ. ಒಂದು ಪಂದ್ಯ ಡ್ರಾ ಆಗಿದೆ. ಹೀಗಾಗಿ ಅದರ ಗೆಲುವಿನ ಶೇಕಡಾವಾರು 55 ಆಗಿದೆ. ಅಂದರೆ ಪಿಸಿಟಿ ವಿಷಯದಲ್ಲಿ ಭಾರತ ತಂಡ ಈಗ ಆಸ್ಟ್ರೇಲಿಯಾಕ್ಕಿಂತ ಹೆಚ್ಚು ಮುಂದಿ
7 / 10
ಉಳಿದಂತೆ ಬಾಂಗ್ಲಾದೇಶ ತಂಡ 4ನೇ ಸ್ಥಾನದಲ್ಲಿದ್ದರೆ, ಅದರ ಗೆಲುವಿನ ಶೇಕಡಾವಾರು 50 ಆಗಿದೆ. 5ನೇ ಸ್ಥಾನದಲ್ಲಿರುವ ಪಾಕಿಸ್ತಾನ 5 ಪಂದ್ಯಗಳನ್ನು ಆಡಿದ್ದು ಎರಡರಲ್ಲಿ ಮಾತ್ರ ಗೆದ್ದಿದೆ. ಉಳಿದ ಮೂರು ಪಂದ್ಯಗಳಲ್ಲಿ ಸೋತಿದೆ. ಈ ನಿಟ್ಟಿನಲ್ಲಿ ಅದರ ಗೆಲುವಿನ ಶೇಕಡಾವಾರು 36.66 ಆಗಿದೆ.
8 / 10
ವೆಸ್ಟ್ ಇಂಡೀಸ್ ಕೂಡ 36.66 ಗೆಲುವಿನ ಶೇಕಡಾವಾರು ಹೊಂದಿದ್ದು, ತಂಡವು ಪ್ರಸ್ತುತ ಆರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 25 ಗೆಲುವಿನ ಶೇಕಡಾವಾರುವಿನೊಂದಿಗೆ ಏಳನೇ ಸ್ಥಾನದಲ್ಲಿದೆ.
9 / 10
ಸದ್ಯ ಭಾರತದ ವಿರುದ್ಧ ಸರಣಿ ಸೋತಿರುವ ಇಂಗ್ಲೆಂಡ್ ಸ್ಥಿತಿ ತೀರ ಅದಗೆಟ್ಟಿದೆ. ತಂಡವು ಇದುವರೆಗೆ 8 ಪಂದ್ಯಗಳನ್ನು ಆಡಿದ್ದು, ಈ ಪೈಕಿ ಕೇವಲ 3 ಪಂದ್ಯಗಳನ್ನು ಗೆದ್ದಿದೆ. ಇಲ್ಲಿಯವರೆಗೆ ತಂಡ 5 ಪಂದ್ಯಗಳಲ್ಲಿ ಸೋತಿದೆ. ರಾಂಚಿ ಟೆಸ್ಟ್‌ಗೂ ಮುನ್ನ ಇಂಗ್ಲೆಂಡ್‌ನ ಪಿಸಿಟಿ 21.88 ಇದ್ದು, ಈಗ 19.44ಕ್ಕೆ ಕುಸಿದಿದೆ.
10 / 10
ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ ತಂಡ ಪ್ರಸ್ತುತ ಎಂಟನೇ ಸ್ಥಾನದಲ್ಲಿದೆ. ಹೀಗಾಗಿ ಡಬ್ಲ್ಯುಟಿಸಿ ಫೈನಲ್ಗೇರುವ ಆಂಗ್ಲರ ಕನಸು ನುಚ್ಚುನೂರಾಗಿದೆ. ಉಳಿದಂತೆ ಈ ಸರಣಿಯ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ಭಾರತ ತಂಡ ಆ ಪಂದ್ಯವನ್ನೂ ಗೆದ್ದರೆ, ನಂಬರ್ ಒನ್ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಿವೆ.