
ರಾಜ್‌ಕೋಟ್‌ನಲ್ಲಿ ನಡೆಯಿತು 434 ರನ್‌ಗಳಿಂದ ಏಕಪಕ್ಷೀಯ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಈ ಗೆಲುವಿನೊಂದಿಗೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲೂ ಈ ಗೆಲುವಿನ ಲಾಭ ಪಡೆದಿದೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ. ಈ ಹಿಂದೆ ಆಸ್ಟ್ರೇಲಿಯ ತಂಡ ಎರಡನೇ ಸ್ಥಾನದಲ್ಲಿತ್ತು, ಆದರೆ ಇದೀಗ ಮತ್ತೊಮ್ಮೆ ಟೀಂ ಇಂಡಿಯಾ ತನ್ನ ಅಧಿಪತ್ಯ ಸಾಧಿಸಿದೆ.

59.52 ಗೆಲುವಿನ ಶೇಕಡಾವಾರುವಿನೊಂದಿಗೆ ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡ 55.00 ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನಕ್ಕೆ ಜಾರಿದೆ.

ಇತ್ತೀಚೆಗಷ್ಟೆ ದಕ್ಷಿಣ ಆಫ್ರಿಕಾ ತಂಡವನ್ನು 2- 0 ಅಂತರದಿಂದ ಮಣಿಸಿದ್ದ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಗೆಲುವಿನ ಶೇಕಡಾವಾರುವಿನೊಂದಿಗೆ ಮೊದಲ ಸ್ಥಾನದಲ್ಲಿದೆ.

ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಈ ಹಿಂದೆ ಎರಡನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋಲಿನ ನಂತರ 5 ನೇ ಸ್ಥಾನಕ್ಕೆ ಜಾರಿತ್ತು. ಆದರೆ ಎರಡು ಮತ್ತು ಮೂರನೇ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ ಮತ್ತೆ ತನ್ನ ಸ್ಥಾನವನ್ನು ಅಲಂಕರಿಸಿದೆ.

ಸರಣಿಯ ಎರಡನೇ ಪಂದ್ಯವನ್ನು ಗೆದ್ದು ಮೂರನೇ ಸ್ಥಾನಕ್ಕೆ ತಲುಪಿದ್ದ ಟೀಂ ಇಂಡಿಯಾ ಇದೀಗ ಮತ್ತೊಂದು ಗೆಲುವಿನ ನಂತರ ಎರಡನೇ ಸ್ಥಾನಕ್ಕೆ ತಲುಪಿದೆ.

ಭಾರತದ ವಿರುದ್ಧ ಸತತ ಎರಡು ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ತಂಡ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಭಾರೀ ಕುಸಿತ ಕಂಡಿದೆ. ಈ ಪಂದ್ಯಕ್ಕೂ ಮುನ್ನ 25.00 ಪಿಸಿಟಿ ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ತಂಡ ಇದೀಗ 21.87 ಪಿಸಿಟಿ ಅಂಕಗಳೊಂದಿಗೆ 8ನೇ ಸ್ಥಾನಕ್ಕೆ ಕುಸಿದಿದೆ.

ಹೀಗಾಗಿ ಬೆನ್ ಸ್ಟೋಕ್ಸ್ ಮತ್ತು ಬ್ರೆಂಡನ್ ಮೆಕಲಮ್ ಅವರ ಭಾಝ್ ಬಾಲ್ ಕ್ರಿಕೆಟ್ ಮಂತ್ರ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಸಂಪೂರ್ಣ ವಿಫಲವಾಗಿದ್ದು, ಈಗ ಇಂಗ್ಲೆಂಡ್ ತಂಡವು 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ರೇಸ್‌ನಿಂದ ಬಹುತೇಕ ಹೊರಗುಳಿದಿದೆ.
Published On - 7:00 pm, Sun, 18 February 24